ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಹೊಸಕಟ್ಟೆ ಹಾಗೂ ಚೆಕ್ ಡ್ಯಾಮ್‌ಗಳು ತುಂಬಿ ಅಪಾರದ ಪ್ರಮಾಣ ನೀರು ಹರಿದು ದೊಡ್ಡೇರಿಕೆರೆ ಸೇರುತ್ತಿದೆ. ಕುರುಡಿಹಳ್ಳಿಯಿಂದ ಕನ್ನೇನಹಳ್ಳಿ ಕಾವಲಿಗೆ ತೆರಳುವ ರಸ್ತೆ ಬಂದ್ ಆಗಿದ್ದು, ಕನ್ನೇನಹಳ್ಳಿ ಕಾವಲಿನಲ್ಲಿ ವಾಸ ಮಾಡುವ ನಾಲ್ಕು ಕುಟುಂಬದ ಮಕ್ಕಳಿಗೆ ಶಾಲೆಗೆ ಹೋಗಲು ಹರಿಯುವ ನೀರು ಅಡ್ಡಿಯಾಗಿದೆ. ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಿದ ಕಾರಣ ಮಳೆಗಾಲದ ಸಮಯದಲ್ಲಿ ನೀರು ನಿಂತು ಸಂಚಾರ ಅಸಾಧ್ಯವಾಗುತ್ತಿದೆ. ಇದೀಗ ರಸ್ತೆ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸರಿಯಾದ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



