ಚಿತ್ರದುರ್ಗ: ಗ್ರಾಮಾಂತರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಕೆ.ಪಾಂಡಿ ಎಂಬ ವ್ಯಕ್ತಿಯಿಂದ 35 ಲಕ್ಷ ಹಣ ಪಡೆದು ನಕಲಿ ಚಿನ್ನದ ನಾಣ್ಯ ಕೊಟ್ಟು ಎಸ್ಕೇಪ್ ಆಗಿದ್ದ ರಮೇಶ್ ಹಾಗೂ ರಾಮಕೃಷ್ಣನನ್ನು ಖಚಿತ ಮಾಹಿತಿ ಆಧರಿಸಿ ಗುಡ್ಡದ ರಂಗವನಹಳ್ಳಿ ಬಳಿ ಆರೋಪಿಗಳನ್ನು ಬಂಧಿಸುವಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮೀನು ಉಳುಮೆ ವೇಳೆ ಚಿನ್ನದ ನಾಣ್ಯ ಸಿಕ್ಕಿದೆ ಎಂದು ನಂಬಿಸಿ ವಂಚನೆ ಮಾಡಿದ್ರು, ಬಳಿಕ ಕೆ.ಪಾಂಡಿಗೆ ನಾಣ್ಯಗಳು ನಕಲಿ ಎಂದು ತಿಳಿದ ಬಳಿಕ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 22 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಎಸ್ಪಿ ರಂಜಿತ್ ಕುಮಾರ್ ಭಂಡಾರೂ ಮಾರ್ಗದರ್ಶನದಲ್ಲಿ ವಿಚಾರಣೆ ಮುಂದುವರೆದಿದೆ.ಚಿತ್ರದುರ್ಗ: ಗ್ರಾಮಾಂತರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಕೆ.ಪಾಂಡಿ ಎಂಬ ವ್ಯಕ್ತಿಯಿಂದ 35 ಲಕ್ಷ ಹಣ ಪಡೆದು ನಕಲಿ ಚಿನ್ನದ ನಾಣ್ಯ ಕೊಟ್ಟು ಎಸ್ಕೇಪ್ ಆಗಿದ್ದ ರಮೇಶ್ ಹಾಗೂ ರಾಮಕೃಷ್ಣನನ್ನು ಖಚಿತ ಮಾಹಿತಿ ಆಧರಿಸಿ ಗುಡ್ಡದ ರಂಗವನಹಳ್ಳಿ ಬಳಿ ಆರೋಪಿಗಳನ್ನು ಬಂಧಿಸುವಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮೀನು ಉಳುಮೆ ವೇಳೆ ಚಿನ್ನದ ನಾಣ್ಯ ಸಿಕ್ಕಿದೆ ಎಂದು ನಂಬಿಸಿ ವಂಚನೆ ಮಾಡಿದ್ರು, ಬಳಿಕ ಕೆ.ಪಾಂಡಿಗೆ ನಾಣ್ಯಗಳು ನಕಲಿ ಎಂದು ತಿಳಿದ ಬಳಿಕ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 22 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಎಸ್ಪಿ ರಂಜಿತ್ ಕುಮಾರ್ ಭಂಡಾರೂ ಮಾರ್ಗದರ್ಶನದಲ್ಲಿ ವಿಚಾರಣೆ ಮುಂದುವರೆದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



