Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ದಾವಣಗೆರೆ»ಸಮರ್ಥ್ ಪಟ್ಟಾಭಿಷೇಕಕ್ಕೆ ‘ಕೈ’ ಪಟ್ಟು;  ಶುರುವಾಯ್ತು ಮೇಜರ್ ಸರ್ಜರಿ
ದಾವಣಗೆರೆ

ಸಮರ್ಥ್ ಪಟ್ಟಾಭಿಷೇಕಕ್ಕೆ ‘ಕೈ’ ಪಟ್ಟು;  ಶುರುವಾಯ್ತು ಮೇಜರ್ ಸರ್ಜರಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 27, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಸಮರ್ಥ್ ಪಟ್ಟಾಭಿಷೇಕಕ್ಕೆ ‘ಕೈ’ ಪಟ್ಟು;  ಶುರುವಾಯ್ತು ಮೇಜರ್ ಸರ್ಜರಿ

ಟಿಒಬಿ ನ್ಯೂಸ್ ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿರುವುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ನಾಮಪತ್ರ ವಾಪಸ್ ಪಡೆಯುವ ವಿಚಾರದಲ್ಲಿ ನಡೆದ ಹೈಡ್ರಾಮಕ್ಕೆ ಇದೀಗ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯ ತಲೆದಂಡವಾಗಿದೆ.

ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಓರ್ವನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬರೋಬ್ಬರಿ 6 ವರ್ಷ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮೇಜರ್ ಸರ್ಜರಿ

ಹೌದು, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಎಚ್. ಸುಭಾನ್ ಸಾಬ್ ಅವರನ್ನು ಪಕ್ಷವು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

ಸುಭಾನ್ ಸಾಬ್ ಕಾಂಗ್ರೆಸ್ ಪಕ್ಷದಲ್ಲಿ ದೀರ್ಘಕಾಲದಿಂದಲೂ ಕಾರ್ಯಕರ್ತರಾಗಿ, ನಂತರ ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷವು ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಅಸಮಾಧಾನ ಹುಟ್ಟಿತ್ತು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯನ್ನು ಪಕ್ಷ ಗಮನಿಸದೇ ಹೋದುದರಿಂದ ಕೆಲವು ನಾಯಕರು ಬಂಡಾಯ ಎದ್ದಿದ್ದರು.

ಇದರ ಭಾಗವಾಗಿ ಸುಭಾನ್ ಸಾಬ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಪಕ್ಷದ ಶಿಸ್ತನ್ನು ಉಲ್ಲಂಘಿಸಿ, ಪಕ್ಷದ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಪಕ್ಷವು ಕಠಿಣ ಕ್ರಮ ಕೈಗೊಂಡಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ಹೊರಡಿಸಿದ ಆದೇಶದಲ್ಲಿ ಸುಭಾನ್ ಸಾಬ್ ಅವರನ್ನು ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಈ ಉಚ್ಚಾಟನೆ ಆದೇಶವು ಕಾಂಗ್ರೆಸ್ ಪಕ್ಷದ ಶಿಸ್ತು ಕ್ರಮವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪಕ್ಷದ ನಿರ್ಧಾರಗಳ ವಿರುದ್ಧ ಹೋಗುವವರಿಗೆ ಕಠಿಣ ಶಿಕ್ಷೆಯನ್ನು ನೀಡುವುದರ ಮೂಲಕ ಪಕ್ಷ ತನ್ನ ಒಳಗಿನ ಶಿಸ್ತನ್ನು ಕಾಯ್ದುಕೊಳ್ಳಲು ಬಯಸುತ್ತಿದೆ. ಆದರೆ ಈ ಕ್ರಮವು ಈಗಾಗಲೇ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್‌ಗೆ ಇನ್ನಷ್ಟು ಸವಾಲುಗಳನ್ನು ತಂದೊಡ್ಡುವ ಸಾಧ್ಯತೆಗಳು ದಟ್ಟವಾಗಿವೆ.

Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 27/03/2026 (ಶುಕ್ರವಾರ)
Next Article ರಂಗೇರಿದ ಬೈ ಎಲೆಕ್ಷನ್ ಅಖಾಡ; ಸ್ಟಾರ್ ಪ್ರಚಾರಕರು ಎಂಟ್ರಿ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ

May 25, 2026

SBI Apprentice Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7,150 ಹುದ್ದೆಗಳ ನೇಮಕಾತಿ, ಜೂನ್ 8 ಕೊನೆ ದಿನ!

May 24, 2026

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ: ದಿಢೀರ್ ಸಾವುಗಳ ಸುತ್ತ ಒಂದು ಚಿಂತನೆ

May 21, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.