ಹಿರಿಯೂರು: ಬೆಳ್ಳಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತರು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ THO ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ವೆಂಕಟೇಶ್ ಮೇಲೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನಲೆ ಇಂದು ಬೆಳಗ್ಗೆ ಮನೆ ಹಾಗೂ ಕ್ಲಿನಿಕ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



