ಎಸ್‌ಎಲ್‌ವಿ ಪ್ರೊಡಕ್ಷನ್ಸ್ ಹೆಸರಲ್ಲಿ ನೋಂದಣಿ ಸ್ಟಾರ್ ನಟರ ಚಿತ್ರಕ್ಕೆ ಬಂಡವಾಳ ಹಾಕಲು ಸಿದ್ಧತೆ ಬೆಂಗಳೂರುಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೆಸರಿನಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರುಪಾಯಿ ವಂಚನೆ ಮಾಡಿರುವ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ಚಲನಚಿತ್ರ ನಿರ್ಮಾಣಕ್ಕೂ ಮುಂದಾಗಿದ್ದಳು ಎಂಬ ಮಾತುಗಳು ಕೇಳಿ ಬಂದಿವೆ.
ಚಲನಚಿತ್ರ ನಿರ್ಮಾಣ ಸಂಬಂಧ ಎಸ್‌ಎಲ್‌ವಿ ಪ್ರೊಡಕನ್ ಹೆಸರಿನಸಂಸ್ಥೆಯನ್ನು ಕನ್ನಡಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಿಸಿದ್ದಳು. ಈ ಸಂಸ್ಥೆ ಮೂಲಕ ಸ್ಟಾರ್‌ನಓಲ ಚಿತ್ರಗಳಿಗೆ ಬಂಡವಾಳ ಸುರಿಯಲು ತಯಾರಿ ನಡೆಸಿದ್ದಳು. ಈ ಕುರಿತು ಮಾಹಿತಿ ಕೋರಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯ್ಕ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸೋದರಿ ಎಂದು ಹೇಳಿಕೊಂಡು ಹಲವರಿಗೆ ಐಶ್ವರ್ಯ ಗೌಡ ವಂಚಿಸಿರುವ ಆರೋಪವಿದೆ. ಈ ವಂಚನೆ ಪ್ರಕರಣಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಈ ತನಿಖೆಯಲ್ಲಿ ಸಿನಿಮ: ನಿರ್ಮಾಣದ ಮಾಹಿತಿ ಪತ್ತೆಯಾದ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿಯಿಂದ ಮಾಹಿ ಪಡೆಯಲು ಸಿಐಡಿ ಅಧಿಕಾರಗಳು ಮುಂದಾಗಿದ್ದಾರೆ ಎನ್ನಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



