ಚಿತ್ರದುರ್ಗ: ಬೈಕ್ ಬಾಗ್ ಬಸ್ ನಡುವೆ ಅಪಘಾತ ಸಂಭವಿಸಿದ ವೇಳೆ ಧಿಡೀರ್ ಆಗಿ ಕಾಣಿಸಿಕೊಂಡ ಬೆಂಕಿಗೆ ಇಡೀ ಬಸ್ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಹೊರವಲಯದ ಮದಕರಿ ಪುರದ ಬಳಿ ನಡೆದಿದೆ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಮೇಶ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಆದರೆ ಅಪಘಾತದ ಬಳಿಕ ಬಸ್ಸಿನ ಕೆಳಗೆ ಬೈಕ್ ಸಿಲುಕಿ ಸ್ವಲ್ಪ ದೂರ ಹಾಗೆ ಸಾಗಿದ ಕಾರಣ ಸ್ಪಾರ್ಕ್ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಭಿಸಿದೆ.ಬಳಿಕ ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದು ಓಡಿದ್ದಾರೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭಂಡಾರೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



