ಚಿತ್ರದುರ್ಗ: ಬೈಕ್ ಗೆ ಡಿಕ್ಕಿ ಹೊಡೆದು ಗಾಯಗೊಂಡು ನರಳುತ್ತಿದ್ದ ನವಿಲನ್ನು ರೈತರು ರಕ್ಷಣೆ ಮಾಡಿರು ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ನಡೆದಿದೆ. ನವಿಲು ರಸ್ತೆ ದಾಟುವ ವೇಳೆ ಅಪರಿಚಿತ ಕಾರು ಡಿಕ್ಕಿ ಹೊಡೆದುಕೊಂಡು ಹೋಗಿದ್ದಾರೆ. ಅದೇ ಮಾರ್ಗದಲ್ಲಿ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದಂತಹ ಹುಣಸೆಕಟ್ಟೆ ಗ್ರಾಮದ ರೈತರಾದ ಮಾರುತಿ, ಕಾಂತರಾಜ್ ಇತರರು ಸೇರಿ ಗಾಯಗೊಂಡ ನವಿಲನ್ನ ರಕ್ಷಿಸಿ ಗುಡ್ಡದ ರಂಗವನಹಳ್ಳಿ ಪಶು ಚಿಕಿತ್ಸಾ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.ಹುಣಸೇಕಟ್ಟೆ ಗ್ರಾಮದ ರೈತರ ಕಾರ್ಯಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪಕ್ಷಿ ಪ್ರಿಯರು ಧನ್ಯವಾದ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



