ನವದೆಹಲಿ: 2022ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ 5,300 ಕೋಟಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನವದೆಹಲಿಯಲ್ಲಿ ಸಂಸದ ಹಾಗೂ ಸಚಿವರಾದ ವಿ.ಸೋಮಣ್ಣ ಮತ್ತು ಗೋವಿಂದ ಕಾರಜೋಳ ಅವರನ್ನು ಭೇಟಿ ಆಗಿ ಮನವಿ ಮಾಡಿದ್ದಾರೆ.
ಸಂಘದ ಗೌರವಾಧ್ಯಕ್ಷ ಎಚ್.ಆರ್ ತಿಮ್ಮಯ್ಯ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ್ದು, ಕೇಂದ್ರ ಸರ್ಕಾರ 22ರಲ್ಲಿ ನುಡಿದಂತೆ 5,300 ಕೋಟಿ ಹಣ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಕಾಮಗಾರಿ ಸಹ ಆಮೆ ಗತಿಯಲ್ಲಿ ಆಗುತ್ತಿದೆ. ಇದರಿಂದ ಸಾವಿರಾರು ರೈತರಿಗೆ ತೊಂದರೆ ಆಗುತ್ತಿದೆ. ಕೇಂದ್ರ ಸರ್ಕಾರದ ಮೇಲೆ ನೀವು ಒತ್ತಡ ಹಾಕಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದೆ ವೇಳೆ ಚಿಕ್ಕ ಕಬ್ಬಿಗೆರೆ ನಾಗರಾಜ್, ಕೊಟ್ರ ಬಸಪ್ಪ, ನಿಜಲಿಂಗಪ್ಪ, ಮಲ್ಲಿಕಾರ್ಜುನ್ ಮತ್ತಿತರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



