ರಾಜ್ಯ ಸರ್ಕಾರ ರಾಜ್ಯದಲ್ಲಿ ಯೂರಿಯ ಗೊಬ್ಬರ ಕೃತಕ ಅಭಾವವನ್ನು ಸೃಷ್ಟಿ ಮಾಡುವುದರ ಮೂಲಕ ಗೊಬ್ಬರಕ್ಕಾಗಿ ಅನ್ನದಾತರುಅಲೆದಾಡುವಂತ ಪರಿಸ್ಥಿತಿಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿದೆ ಇದನ್ನು ವಿರೋಧಿಸಿ ಭಾರತೀಯ ಜನತಾಪಾರ್ಟಿಯ ರೈತ ಮೋರ್ಚಾದವತಿಯಿಂದ ಜು. 29ರ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ತಿಳಿಸಿದ್ದಾರೆ.ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ರೈತರ ಬಗ್ಗೆ ಎಳ್ಳಷ್ಟು ಸಹ ಕಾಳಜಿ ವಹಿಸುತ್ತಿಲ್ಲ. ತಮ್ಮಅಧಿಕಾರ ಕುರ್ಚಿ ಉಳಿವಿಗಾಗಿ ಸಿದ್ದರಾಮಯ್ಯ ನಿರತರಾಗಿದ್ದಾರೆ. ದೆಹಲಿಯಲ್ಲಿ ರೈತರ ಬಗ್ಗೆ ಕೇಂದ್ರ ಕೃಷಿ ಸಚಿವರನ್ನಾಗಲೀ ಸಂಬಂಧಪಟ್ಟ ಅಧಿಕಾರಿಗಳನ್ನಾಗಲೀ ಭೇಟಿ ಮಾಡಿ ನಮ್ಮ ರಾಜ್ಯಕ್ಕೆ ಯೂರಿಯಾ ಬೇಡಿಕೆ ಬಗ್ಗೆ ಬೇಡಿಕೆಯನ್ನುಇಟ್ಟಿಲ್ಲ ರೈತರೆಲ್ಲರೂ ಸಹ ಬಿತ್ತನೆ ಕಾರ್ಯವನ್ನು ಪ್ರಾರಂಭ ಮಾಡಿದ್ದಾರೆ.. ಎಲ್ಲಾ ರೈತರಿಗೂ ಯೂರಿಯಾ ಗೊಬ್ಬರದಅವಶ್ಯಕತೆಯಿದೆ.ಇದರ ಬಗ್ಗೆ ಗಮನಹರಿಸಿದ ಸಿದ್ದರಾಮಯ್ಯರವರು ಅನ್ನದಾತರ ಬಗ್ಗೆ ಯಾವುದೇ ಗಮನ ನೀಡಿಲ್ಲ ಎಂದುವೆಂಕಟೇಶ್ ಯಾದವ್ ಆರೋಪಿಸಿದರು.
ಜು. 29 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ
ಪ್ರತಿಭಟನೆಯನ್ನು ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ನೇರ್ಲಗುಂಟೆತಿಪ್ಪೇಸ್ವಾಮಿ, ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ .ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ ರೈಥಮೋರ್ಚಾದ ಕಾರ್ಯದರ್ಶಿಯಾದ ಮಲ್ಲಿಕಾರ್ಜನ್, ರಾಜೇಶ್ ಬುರುಡೆಕಟ್ಟೆ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ರೈತರು ಬಾಗವಹಿಸುವುದರ ಮೂಲಕ ಸಿದ್ದರಾಮಯ್ಯ ಸರ್ಕಾರದವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಬೇಕಿದೆ ಇದರಲ್ಲಿ ಎಲ್ಲಾ ರೈತ ಬಾಂಧವರು ಬಿಜೆಪಿಯ ವಿವಿಧ ಮಂಡಲ, ಮೋರ್ಚಾದಅಧ್ಯಕ್ಷರು ಭಾಗವಹಿಸುವುದರ ಮೂಲಕ ಪ್ರತಿಭಟನೆಯನ್ನು ಯಶಸ್ವಿ ಮಾಡಿಕೊಡುವಂತೆ ವೆಂಕಟೇಶ್ ಯಾದವ್ ಮನವಿ
ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



