ಬೆಂಗಳೂರು: ಕಳೆದ ತಿಂಗಳು ಸಂಗ್ರಹಿಸಲಾಗಿದ್ದ 175 ಹಾಲಿನ ಮಾದರಿಗಳ ಪೈಕಿ 73 ಮಾದರಿಗಳ ವರದಿ ಬಂದಿದ್ದು, ಈ ಪೈಕಿ ನಾಲ್ಕು ಮಾದರಿಗಳ ಗುಣಮಟ್ಟ ಕಡಿಮೆ ಎಂಬುದಾಗಿ ಉಲ್ಲೇಖವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯ ಪ್ರಗತಿಯಲ್ಲಿದೆ. ಅಂತೆಯೇ ಇನ್ನೂ ಹೆಚ್ಚಿನ ಹಾಲಿನ ಮಾದರಿಗಳ ವಿ ಟ ಸಂಗ್ರಹಣೆ ಮತ್ತು ವಿಶ್ಲೇಷಣೆಗಾಗಿ ಈ ತಿಂಗಳಲ್ಲಿ ಕೆಎಂಎಫ್ ಜತೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಜುಲೈನಲ್ಲಿ 3,489 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಲಾಗಿದೆ. ಈ ಪೈಕಿ 17 – ಮಾದರಿಗಳು ಅಸುರಕ್ಷಿತ ಮತ್ತು 18 ಮಾದರಿಗಳು ಕಡಿಮೆ ಗುಣಮಟ್ಟ ಹ ಎಂದು ವರದಿಯಾಗಿದೆ. ಅಂತೆಯೇ ಆಹಾರ ಸುರಕ್ಷತೆ ಮತ್ತು ನೈರ್ಮ ಲ್ಯದ ಕುರಿತು ರಾಜ್ಯದ 1,557 ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ತಪಾಸಣೆ ನಡೆಸಲಾಗಿದೆ. ಈ ಪೈಕಿ ಲೋಪ ಕಂಡು ಬಂದ 406 ಘಟಕಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



