Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಚಿತ್ರದುರ್ಗ

ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 27, 2026Updated:March 27, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

  ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ಜ್ಞಾನಗಂಗೋತ್ರಿ ಕ್ಯಾಂಪಸ್‍ನಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಪ್ರಥಮ ಹಾಗೂ ದ್ವಿತೀಯ ಹಂತದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು.

ಚಿತ್ರದುರ್ಗ ವೈದ್ಯಕೀಯ ಕಾಲೇಜು ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ.ಯುವರಾಜ್ ಶಿಬಿರಕ್ಕೆ ಚಾಲನೆ ನೀಡಿ, “ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಗಳಂತೆ ಈ ಶಿಬಿರ ನಡೆಸಲಾಗುತ್ತಿದ್ದು, ಇದು ಭವಿಷ್ಯದ ವೈದ್ಯರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಪೂರಕವಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್ ಮಾತನಾಡಿ, ಯುವಜನರಲ್ಲಿ ಜೀವನಶೈಲಿ ಸಂಬಂಧಿತ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಇಂತಹ ಶಿಬಿರಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಶೈಕ್ಷಣಿಕ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.
ಶಿಬಿರದಲ್ಲಿ ಸುಮಾರು 300 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೂರು ಹಂತಗಳಲ್ಲಿ ತಪಾಸಣೆ ನಡೆಸಲಾಗಿದ್ದು, ರಕ್ತ ಪರೀಕ್ಷೆ, ಸಕ್ಕರೆ ಮಟ್ಟ, ಎಚ್‍ಬಿಎ1ಸಿ, ಯಕೃತ್ ಮತ್ತು ಮೂತ್ರಪಿಂಡ ಕಾರ್ಯ ಪರೀಕ್ಷೆ ಸೇರಿದಂತೆ ಸಮಗ್ರ ತಪಾಸಣೆ ಮಾಡಲಾಯಿತು. ಜನರಲ್ ಮೆಡಿಸಿನ್, ನೇತ್ರಶಾಸ್ತ್ರ ಇಎನ್‍ಟಿ, ಚರ್ಮರೋಗ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಎಲ್.ಎಚ್.ಅಶ್ವಿನಿ ಸೇರಿದಂತೆ ಅಕಾಡೆಮಿಕ್ ರಿಜಿಸ್ಟ್ರಾರ್, ರಿಸರ್ಚ್ ರಿಜಿಸ್ಟ್ರಾರ್, ಹಣಕಾಸು ಸಲಹೆಗಾರರು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಮಾರ್ಚ್ 31ಕ್ಕೆ ತೃತೀಯ ಭಾಷೆ ಪರೀಕ್ಷೆ ಮುಂದೂಡಿಕೆ
******
ಚಿತ್ರದುರ್ಗ ಮಾರ್ಚ್ 27:
ಮಹಾವೀರ ಜಯಂತಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ಪೂರ್ವ ನಿಗದಿತ ವೇಳಾಪಟ್ಟಿಯಂತೆ 2026ರ ಮಾರ್ಚ್ 30ರ ಸೋಮವಾರದಂದು ತೃತೀಯ ಭಾಷೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 07 ಹೆಚ್‍ಹೆಚ್‍ಎಲ್ 2026ರ ಅನ್ವಯ, ಈ ಹಿಂದೆ ಮಾರ್ಚ್ 31ಕ್ಕೆ ನಿಗದಿಯಾಗಿದ್ದ ಮಹಾವೀರ ಜಯಂತಿ ರಜೆಯನ್ನು ಮಾರ್ಚ್ 30ರ ಸೋಮವಾರಕ್ಕೆ ಬದಲಾವಣೆ ಮಾಡಲಾಗಿದೆ. ಈ ಕಾರಣದಿಂದಾಗಿ ಸೋಮವಾರ ನಡೆಯಬೇಕಿದ್ದ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ರ ಮಂಗಳವಾರದಂದು ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯಗಳ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bangalore chitradurga karanataka ಆರೋಗ್ಯ ತಪಾಸಣಾ ಶಿಬಿರ ಚಿತ್ರದುರ್ಗ ವಿದ್ಯಾರ್ಥಿ ವೈದ್ಯಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleಉಗ್ರ ದಾವೂದ್ ಹೆಸರಿದ್ದ ಬಸ್ ಚಿಕ್ಕಮಗಳೂರು ಪೊಲೀಸ್ ವಶಕ್ಕೆ
Next Article ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

May 10, 2026
Add A Comment
Leave A Reply Cancel Reply

Advertisement
Latest Posts

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.