ಸ್ವಾತಂತ್ರ್ಯ ಸಮಾನತೆ ಮತ್ತು ಬಾಂಧವ್ಯ ಈ ಮೂರು ಮೌಲ್ಯಗಳೇ ಪ್ರಭುತ್ವದ ನಿಜವಾದ ಮೂಲ ಅಡಿಪಾಯ ಪ್ರಜಾಪ್ರಭುತ್ವ ಕೇವಲ ಹಕ್ಕು ಮಾತ್ರವಲ್ಲ ಅದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ್ ಸಿದ್ದೇಶ್ ಅವರು ತಿಳಿಸಿದರು.ತಾಲೂಕು ಆಡಳಿತ,ತಾಲೂಕು ಪಂಚಾಯಿತಿ,ನಗರಸಭೆ,ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ತಹಸಿಲ್ದಾರ್ ಸಿದ್ದೇಶ್, ಪ್ರಮೋದ್ EO ತಾಲೂಕ್ ಪಂಚಾಯತ್, ಜೆ.ದಿನೇಶ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ರಾಘವೇಂದ್ರ ಸಿಡಿಪಿಓ ಶಿವಕುಮಾರ್ ಡಿ ವೈ ಎಸ್ ಪಿ ಹಿರಿಯೂರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದರು.ಡಿವೈಎಸ್ಪಿ ಶಿವಕುಮಾರ್ ಮಾತನಾಡಿ ಜನರಿಂದ ಜನರಿಗಾಗಿ ಜನರ ಆಡಳಿತವೇ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದ ಮೌಲ್ಯ ಎಂದರೆ ಭಾವನೆಗಳ ಸ್ವಾತಂತ್ರ್ಯ, ಮತದಾನದ ಹಕ್ಕು, ಸಮಾನ ಅವಕಾಶಗಳು ಎಲ್ಲರಿಗೂ ಸಮಾನ ನ್ಯಾಯ ಕಲ್ಪಿಸುವುದೇ ಪ್ರಜಾಪ್ರಭುತ್ವ ಎಂದು ತಿಳಿಸಿದರು. ದಿನೇಶ್ ಅವರು ಮಾತನಾಡಿ ಪ್ರಜಾಪ್ರಭುತ್ವ ದಿನಾಚರಣೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವಂತಹ ನಿಟ್ಟಿನಲ್ಲಿ ನನ್ನ ಮತ ನನ್ನ ಹಕ್ಕು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದು ತಿಳಿಸಿದರು.ತಾ.ಪಂ. ಇಒ ಪ್ರಮೋದ್ ಸಹಾಯಕ ನಿರ್ದೇಶಕರು ದಿನೇಶ್ , ಸಿಡಿಪಿಒ ರಾಘವೇಂದ್ರ ಡಿವೈಎಸ್ಪಿ ಶಿವಕುಮಾರ್ ತಾಲೂಕು ಮಟ್ಟದ ಅಧಿಕಾರಿಗಳು , ಮುಖಂಡರಾದ ಮಾರುತೇಶ್,ಕಣಿಮೇಶ್ , ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಇತರರಿದ್ದರು .
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







