ಚಿತ್ರದುರ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆಯನ್ನು ಜುಲೈ 27, 28 ರಂದು ಬೆಳಗ್ಗೆ 10 ರಿಂದ 5 ರವರೆಗೆ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು, ಈಗ ನಾವು ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು, ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಲೆಯವರು ಶ್ರವಣದ ಯಂತ್ರಕ್ಕೆ ಆಗುವ ವೆಚ್ಚದ ಶೇ.40% ಮೊತ್ತವನ್ನು ಭರಿಸಲಾಗುತ್ತಿದ್ದು, ರೋಗಿಗಳು ಇವರ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ. ಟೀಮ್ ಈಶ್ವರ್ ಮಲ್ಪೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಚಿತ್ರದುರ್ಗ ಜಿಲ್ಲಾ ಘಟಕ ಇವರು ಆಯೋಜಿಸಿರುವ ಈ ಶಿಬಿರದಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಕೇಳಿಸಿಕೊಳ್ಳುವ ತೊಂದರೆಯವರಿಗೆ ಸಂತೋಷವನ್ನು ನೀಡಿ.
ಸೂಚನೆಗಳು
ನೋಂದಣಿ ಕಡ್ಡಾಯವಾಗಿದೆ ಕರೆಮಾಡಿ ನೋಂದಾಯಿಸಿಕೊಳ್ಳಿ. ಹಿರಿಯರಿಗೆ ಮೊದಲ ಆದ್ಯತೆ.ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದರೆ ಜೊತೆಯಲ್ಲಿ ತನ್ನಿ. ಮೊದಲು ನೋಂದಾಯಿಸುವ 40 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಶ್ವರ್ ಮಲ್ಲೆ ಟೀಮ್‌ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ.
ಹೆಚ್ಚಿನ ಮಾಹಿತಿಗಾಗಿ 9902344399, 81971 91644, 8861667950 ಗೆ ಸಂಪರ್ಕಿಸಬಹುದು. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



