ಚಿತ್ರದುರ್ಗ: ತಾಲೂಕು ಅಖಿಲ ಭಾರತ ಗಾಣಿಗರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜು. 13ರ ಭಾನುವಾರ ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.
ಸಮುದಾಯ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿಸದಸ್ಯರು, ಚಿತ್ರದುರ್ಗ ಹಾಗೂ ವಿಜಯಪುರದ ವನಶ್ರೀ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಜಯಬಸವಕುಮಾರ
ಸ್ವಾಮೀಜಿ ವಹಿಸಲಿದ್ದಾರೆ.
ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ನೇರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ವಹಿಸಲಿದ್ದಾರೆ. ತಾಲೂಕು ಗಣಿಗಾರರ ಸಂಘದ ಅಧ್ಯಕ್ಷರಾದಎ.ಆರ್.ತಿಪ್ಪೇಸ್ವಾಮಿಪ್ರಾಸ್ತಾವಿಕ ನುಡಿಗಳನ್ನಾಡುವರುಅತಿಥಿಗಳಾಗಿ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಕೆ.ಡಿ.ಪಿ.ಸದಸ್ಯರು,ವೀರಶೈವ ಸಮಾಜದ ಉಪಾಧ್ಯಕ್ಷರು, ಹಾಗೂ ಜಿಲ್ಲಾ ಗಾಣಿಗ ಸಮಾಜದ ಕಾರ್ಯದರ್ಶಿ ಗಳಾದ ಕೆ.ಸಿ. ನಾಗರಾಜ್, ಯುನಿಟಿ ಹೆಲ್ತ್ಸೆಂಟರ್‍ನ ವೈದ್ಯರಾದ ಶ್ರೀಮತಿ ಡಾ. ಜ್ಯೋತಿ ವಿಜಯ ಕುಮಾರ್. ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷರಾದ ಡಿ.ಎಸ್. ಸುರೇಶ್‍ಬಾಬು(ಸೈಟ್ ಬಾಬಣ್ಣ). ಚಿತ್ರದುರ್ಗ ತಾಲ್ಲೂಕು ಗಾಣಿಗರ ಸಂಘ ಮಹಿಳಾ ವಿಭಾಗದ ಗೌರವಾಧ್ಯಕ್ಷರಾದ ಶ್ರೀಮತಿ ಕೆ.ಸಿ.ವೀಣಾಚಿತ್ರದುರ್ಗ ತಾಲ್ಲೂಕು ಗಾಣಿಗರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಸುರೇಶ್ ಬಾಬು ಹಿರಿಯಉಪಾಧ್ಯಕ್ಷರಾದ ಡಿ.ಎಸ್.ರುದ್ರಮುನಿ, ಭರಮಸಾಗರ ಭಾಗವಹಿಸಲಿದ್ದಾರೆ. ಉಪನ್ಯಾಸಕರಾದ ಡಾ.ಮೇಘನಾ ಜಿ ಉಪನ್ಯಾಸನೀಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



