ಚಿಕ್ಕಬಳ್ಳಾಪುರ: ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚುಯತ್ನಿಸಿ ವಿಫಲನಾದ ಯುವಕ, ಬಳಿಕ, ತನ್ನ ತಲೆ ಮೇಲೆಯೇ ಆ್ಯಸಿಡ್ ಎರಚಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವತಿಯೊಬ್ಬಳನ್ನು ಆನಂದ್ (25) ಎಂಬತ ಪ್ರೀತಿಸುತ್ತಿದ್ದ. ಆದರೆ, ಆಕೆ ಈತನ ಪ್ರೀತಿಯನ್ನು ನಿರಾಕರಿಸಿದ್ದಳು. ಮಂಗಳವಾರ ಆಕೆಯ ಮನೆ ಬಳಿ ತೆರಳಿದ ಈತ, ತನ್ನನ್ನು ಪ್ರೀತಿಸುವಂತೆ ಮತ್ತೆ ಪೀಡಿಸಿದೆ. ನಿರಾಕರಿಸಿದಾಗ ಕುಪಿತಗೊಂಡು ಯುವತಿ ಮೇಲೆ ಟಾಯ್ಲೆಟ್ ಶುಚಿಗೊಳಿಸುವ ಆ್ಯಸಿಡ್ ಎರಚಿದ. ಆಕೆ ಸ್ವಲ್ಪದರಲ್ಲೇ ದಾಳಿಯಿಂದ ತಪ್ಪಿಸಿಕೊಂಡಿದ್ದಾಳೆ. ಆಗ ಹತಾಶೆಗೊಂಡು ತಾನೇ ತನ್ನ ತಲೆ ಮೇಲೆ ಆ್ಯಸಿಡ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಇದರಿಂದ ಆತನ ತಲೆ, ಮುಖ, ಕೈಕಾಲು ಮತ್ತು ದೇಹ ಸಂಪೂರ್ಣ ಸುಟ್ಟು ಹೋಗಿದೆ. ತಕ್ಷಣವೇ ಗ್ರಾಮಸ್ಥರು ಆತನನ್ನು ಆ್ಯಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



