ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಸೇರಿ 3 ಆರೋಪಿಗಳು ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರುವುದು ಖಚಿತವಾಗಿದೆ.ಕಂದಾಯ ಗುಪ್ತಚರ ನಿರ್ದೇ ಶನಾಲಯದ (ಡಿಆರ್‌ಐ) ಅಧಿಕಾರಿಗಳು ಈ ಪ್ರಕರಣದಲ್ಲಿ ರನ್ಯಾ, ತರುಣ್ ಮತ್ತು ಸಾಹಿಲ್ ಸಕಾರಿಯಾ ಜೈನ್‌ನನ್ನು ಕಾಫಿಪೋಸಾ ಕಾಯ್ದೆ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳ ಸಾಗಣೆ ಚಟುವಟಿಕೆಗಳ ತಡೆ ಅಡಿ ಬಂಧಿಸಿದ್ದರು. ಈ ಬಂಧನವನ್ನು ಕಾಫಿ ಪೋಸಾ ಸಲಹಾ ಮಂಡಳಿ ಅನುಮೋದಿಸಿದೆ. ಹೀಗಾಗಿ ಮೂವರು ಆರೋಪಿಗಳಿಗೆ ಕನಿಷ್ಠ ಒಂದು ವರ್ಷ ಜಾಮೀನು ಸಿಗುವುದಿಲ್ಲ.ಆರೋಪಿಗಳು ಭವಿಷ್ಯದಲ್ಲಿ ಮತ್ತೆ ಕಳ್ಳ ಸಾಗಣೆಯಲ್ಲಿ ತೊಡಗಬಾರದೆಂಬ ಕಾರಣ ದಿಂದ ಡಿಆರ್‌ಐ ಕಾಫಿಪೋಸಾ ಕಾಯ್ದೆ ಜಾರಿಗೊಳಿಸಿತ್ತು.ಈ ಕಾಯ್ದೆ ಏಕೆ ಜಾರಿಗೊಳಿಸಲಾಗಿದೆ ಎಂಬುದಕ್ಕೆ ಪೂರಕವಾಗಿ ದಾಖಲೆಗಳನ್ನು ಸಲಹಾ ಮಂಡ ಳಿಗೆ ಸಲ್ಲಿಸಿದ್ದರು. ಪರಿಶೀಲನೆ ಮಾಡಿರುವಸಲಹಾ ಮಂಡಳಿಯು ಅನುಮೋದಿಸಿದೆ. ಈ ಮೂವರು ಆರೋಪಿಗಳನ್ನು ಡಿಆರ್‌ಐ ಅಧಿಕಾರಿಗಳು ಕಾಫಿಪೋಸಾ ಕಾಯ್ದೆಯಡಿ ಬಂಧಿಸಿರುವುದನ್ನು ಹೀಗಾಗಿ 3 ಆರೋಪಿಗಳು ಕನಿಷ್ಠ ಒಂದು ವರ್ಷ ಜೈಲಿನಲ್ಲೇ ಇರುವುದು ಖಚಿತವಾಗಿದೆ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳ ಈ ಜೈಲುವಾಸವನ್ನು ಮತ್ತೆ ಒಂದು ವರ್ಷ ವಿಸ್ತರಿಸಲು ಕಾಯ್ದೆಯಲ್ಲಿ ಅವಕಾಶವಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



