ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಡಬಲ್ ಸಿಹಿಸುದ್ದಿ. ಅವರ ನೆಚ್ಚಿನ ನಾಯಕ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಇಂದು ಬಿಡುಗಡೆಯಾದ ಚಿತ್ರದ ಮೊದಲ ಇದ್ರೆ ನೆಮ್ದಿಯಾಗಿರ್ಬೇಕು ಹಾಡನ್ನು ಭಾರೀ ಕ್ರೇಝ್ ನಿಂದ ಬರಮಾಡಿಕೊಂಡಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ, ಯೂಟ್ಯೂಬ್ ನಲ್ಲಿ ಹಾಡು ಟ್ರೆಂಡಿಂಗ್ ನಲ್ಲಿದೆ. ದರ್ಶನ್ ಜೈಲಿಗೆ ಹೋಗುವ ಮುನ್ನ ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ದರ್ಶನ್ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
ಡಿ.12ಕ್ಕೆ ಡೆವಿಲ್ ಚಿತ್ರ ಬಿಡುಗಡೆ
ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ಇದೇ ವರ್ಷ ಡಿಸೆಂಬರ್ 12ರಂದು ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನ, ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.ಚಿತ್ರದ ಬಗ್ಗೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2011ರಲ್ಲಿ ದರ್ಶನ್ ಜೈಲುಪಾಲಾಗಿದ್ದಾಗ ಅವರ ಸಾರಥಿ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







