Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥನೆ; 48ನೇ ದಿನದ ಮಂಡಲ ಪೂಜೆ
ಜಿಲ್ಲಾ ಸುದ್ದಿ

ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥನೆ; 48ನೇ ದಿನದ ಮಂಡಲ ಪೂಜೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 30, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥನೆ;
48ನೇ ದಿನದ ಮಂಡಲ ಪೂಜೆ

ಟಿಒಬಿ ನ್ಯೂಸ್ ಚಳ್ಳಕೆರೆ

ತಾಲೂಕಿನ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಗುರು ಕರಿಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 31 ಮಂಗಳವಾರ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ವೀರಭದ್ರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ದೇವಸ್ಥಾನ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನರಹರಿನಗರದ ಸದ್ಭಕ್ತರು ಹಾಗೂ ಶ್ರೀಗುರು ಕರಿಬಸವೇಶ್ವರ ಸ್ವಾಮಿ ಸೇವಾ ಟ್ರಸ್ಟ್‌ನ ಸಹಕಾರದಿಂದ ದೇವಸ್ಥಾನ ನಿರ್ಮಾಣಗೊಂಡು 48 ದಿನಗಳು ಪೂರೈಸಿರುವ ಹಿನ್ನೆಲೆಯಲ್ಲಿ ವಿಶೇಷ ಮಂಡಲ ಪೂಜೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನವಗ್ರಹ ಪೂಜೆ, ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ-ಪರಮೇಶ್ವರ ಪೂಜೆ, ವಿಘ್ನೇಶ್ವರ ಪೂಜೆ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಲೋಕಕಲ್ಯಾಣ, ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದರು.

ದೇವಸ್ಥಾನ ಸಮಿತಿ ಸದಸ್ಯ ಕೆಂಚವೀರನಹಳ್ಳಿ ಎನ್. ಮಲ್ಲೇಶ್ ಮಾಹಿತಿ ನೀಡಿ, ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ವಿಶೇಷ ಪೂಜೆಗಳು ಆರಂಭವಾಗಿ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ ಎಂದು ಹೇಳಿದರು. ಆಗಮಿಸುವ ಎಲ್ಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದೂ ತಿಳಿಸಿದರು.

ದೇವಸ್ಥಾನ ಉದ್ಘಾಟನೆಯಾದ ಬಳಿಕ ಇದೇ ಮೊದಲ ಬಾರಿಗೆ 48ನೇ ದಿನದ ವಿಶೇಷ ಪೂಜೆಗಳು ನಡೆಯುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆದು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು.

ಸಭೆಯಲ್ಲಿ ಆರ್ಚಕ ವೀರಸ್ವಾಮಿ, ಪ್ರವೀಣ, ಮಾರುತಿಪ್ರಸಾದ್, ರೇಣುಕಾಸ್ವಾಮಿ, ರಾಜಣ್ಣ, ದಯಾನಂದಪ್ರಹ್ಲಾದ್ ಹಾಗೂ ನಿವೃತ್ತ ಶಿಕ್ಷಕ ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕರ್ನಾಟಕ ಚಿತ್ರದುರ್ಗ ಪ್ರಾರ್ಥನೆ ಬೆಂಗಳೂರು ಮಂಡಲ ಪೂಜೆ ಮಳೆ-ಬೆಳೆ
Follow on Facebook Follow on Instagram
Share. Facebook Twitter WhatsApp Telegram
Previous Articleನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ
Next Article ಪೋಷಕರೇ ನಿಮಗೊಂದು ಸಿಹಿ ಸುದ್ದಿ; ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಶುಲ್ಕ ಸಂಪೂರ್ಣ ವಿನಾಯಿತಿ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

28/05/2026 ರ ನಿತ್ಯ ಭವಿಷ್ಯ

May 28, 2026

27/05/2026 ರ ನಿತ್ಯ ಭವಿಷ್ಯ – ಬುಧವಾರ

May 27, 2026

26/05/2026 ರ ನಿತ್ಯ ಭವಿಷ್ಯ

May 26, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.