Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಸರ್ಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ; ಬದಲಾಯ್ತು ಕಚೇರಿ ಸಮಯ, ಕೇವಲ ಐದೂವರೆ ತಾಸು ಕೆಲಸ !
ರಾಜ್ಯ

ಸರ್ಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ; ಬದಲಾಯ್ತು ಕಚೇರಿ ಸಮಯ, ಕೇವಲ ಐದೂವರೆ ತಾಸು ಕೆಲಸ !

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 1, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಸರ್ಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ; ಬದಲಾಯ್ತು ಕಚೇರಿ ಸಮಯ, ಕೇವಲ ಐದೂವರೆ ತಾಸು ಕೆಲಸ !

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲು, ತಾಪಮಾನ ಇನ್ನಿಲ್ಲದಂತೆ ಏರಿಕೆ ಕಾಣುತ್ತಿದೆ. 9 ಗಂಟೆಯಿಂದ ಶುರುವಾಗುವ ಬಿಸಿಲು 11 ಗಂಟೆ ವೇಳೆಗೆ ಒಂದು ಹಂತ ತಲುಪಿ ಬಿಡುತ್ತಿದೆ. ಇದರಿಂದ ಉದ್ಯೋಗಸ್ಥರು, ಕಾರ್ಮಿಕರು ಹೈರಾಣಾಗಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಏಪ್ರಿಲ್ ಮತ್ತು ಮೇ ತಿಂಗಳುಗಳವರೆಗೆ ಮಾತ್ರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಕಚೇರಿ ಸಮಯ ನಿಗದಿಗೊಳಿಸಲಾಗಿದೆ.

ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್ , ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ.

ಕಚೇರಿ ಅವಧಿ ಬದಲಾದ ಸಮಯದಲ್ಲೂ ಸಾರ್ವಜನಿಕರಿಗೆ ಯಾವುದೇ ಲೋಪ ಅಥವಾ ಅಡಚಣೆಯಾಗದಂತೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಅಥವಾ ಅನಿವಾರ್ಯ ಕೆಲಸಗಳಿದ್ದಾಗ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೂಚಿಸಿದಲ್ಲಿ, ಸಮಯದ ಮಿತಿಯಿಲ್ಲದೆ ನೌಕರರು ಕರ್ತವ್ಯ ನಿರ್ವಹಿಸುವುದು ಕಡ್ಡಾಯವಾಗಿದೆ.

ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ನೌಕರರು ಕರ್ತವ್ಯ ನಿರ್ವಹಿಸಲು ಎದುರಿಸುತ್ತಿರುವ ತೊಂದರೆಗಳನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ನೌಕರರ ಒಕ್ಕೂಟಗಳು ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದವು. ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಮಾನವೀಯ ದೃಷ್ಟಿಯಿಂದ ಕೆಲಸದ ಅವಧಿಯನ್ನು ಬದಲಾಯಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಅಧಿಕೃತ ಆದೇಶದಲ್ಲಿ ತಿಳಿಸಿದ್ದಾರೆ.

goverment Job karanataka ಕರ್ನಾಟಕ ಪೊಲಿಟಿಕ್ಸ್ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 01/04/2026
Next Article ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

April 1, 2026

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

April 1, 2026

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

April 1, 2026
Add A Comment
Leave A Reply Cancel Reply

Advertisement
Latest Posts

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.