ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.
1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಆದರೆ, ಬಲವಂತವಾಗಿ ಖರೀದಿಸುವುದಿಲ್ಲ ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಚಿವರಾದ ಎಂಬಿ ಪಾಟೀಲ್, ಕೆ. ಎಚ್, ಮುನಿಯಪ್ಪ, ರೈತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಟ ಪ್ರಕಾಶ್ ರಾಜ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



