ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇಡುವರೆಗೂ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯ ನೀಡಿತ್ತು. ಈಗ ಸರ್ಕಾರಿ ಶಾಲೆಯ ಮಕ್ಕಳಿಗೂ ಫ್ರೀ ಬಸ್ ಭಾಗ್ಯ ಸಿಕ್ಕಿದೆ. ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ (LKG) ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಉಚಿತ ಬಸ್ ವ್ಯವಸ್ಥೆ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್ನು ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ಬಂದಂತಾಗುತ್ತದೆ. ಜೊತೆಗೆ ಈ ಹಿಂದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿದ್ದ ಪೋಷಕರು ಇನ್ಮುಂದೆ ಒಂದು ಹೆಜ್ಜೆ ಸರ್ಕಾರಿ ಶಾಲೆಗಳ ಕಡೆ ಹಿಡಿಲಿದ್ದಾರೆ ಎಂಬ ಭರವಸೆ ನೀಡಿದೆ ಹಾಗೂ ಸರ್ಕಾರದ ನಿರ್ಧಾರಕ್ಕೆ ಕನ್ನಡಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



