ಬೆಂಗಳೂರು: 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದೆ.ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 ಸಾವಿರ ವಾಹನಗಳನ್ನು ನಾಶಪಡಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿರುವ ಸ್ಕ್ರಾಪಿಂಗ್ ಘಟಕಗಳಲ್ಲಿ ಸ್ಕ್ರಾಪ್ ಮಾಡಲು ಸರ್ಕಾರದ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.ಪರಿಸರ ಸಂರಕ್ಷಣೆ ದೃಷ್ಟಿಯಿಂದ ನೋಂದಣಿಯಾಗಿ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಾಶ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರ ತನ್ನ ಅಧೀನ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಹಳೆ ವಾಹನಗಳ ನಾಶಕ್ಕೆ ಮುಂದಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







