ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ I LOVE YOU ಎಂದು ಅಶ್ಲೀಲ ಮೆಸೇಜ್ ಮಾಡಿರುವ ಆರೋಪ ಕೇಳಿ ಬಂದಿದೆ. ರಾಶ್ಚೆರುವು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿಗೆ ಪಿಡಿಓ ಅಶೋಕ್ ಎಂಬುವವರು I LOVE YOU ಎಂದು ಮೆಸೇಜ್ ಕಳುಹಿಸಿದ್ದಾರೆ. ಈಗಾಗಲೇ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಮದುವೆಯಾಗಿದೆ. ಅಲ್ಲದೇ ಪಿಡಿಓ ಆಗಿರೋ ಅಶೋಕ್ ಗೂ ಮದುವೆಯಾಗಿದೆ. ಅಲ್ಲದೇ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇವತಿಗೆ ಅಶ್ಲೀಲ ಮೆಸೇಜ್ ಹಾಗೂ ಖಾಲಿ ಚೆಕ್ಗಳಿಗೆ ಸಹಿ ಹಾಕುವಂತೆ ಅಶೋಕ್, ಮಾಜಿ ಅಧ್ಯಕ್ಷೆ ನೀಲಾವತಿ ಪತಿ ಎ ಎನ್ ಬಾಬು ರೆಡ್ಡಿ, ಹಾಲಿ ಸದಸ್ಯ ನಾಗೇಶ್ ಹಾಗೂ ಭಾನು ಪ್ರಕಾಶ್ ಎಂಬುವವರಿಂದ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ. ಹೀಗಾಗಿ ನಾಲ್ವರ ವಿರುದ್ಧ ಚೇಳೂರು ಪೊಲೀಸ್ ಠಾಣೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ದೂರು ನೀಡಿದ್ದಾರೆ. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



