ವಿಜಯನಗರ: ಸೋಮವಾರದಿಂದ ಉತ್ತರ ಕರ್ನಾಟಕದ ಶಾಸಕರ ಜೊತೆ ಸುರ್ಜೀವಾಲ ಮಾತನಾಡಲಿದ್ದಾರೆ. ನಮ್ಮಲ್ಲಿ ಯಾವ ಗುಂಪುಗಳು ಇಲ್ಲ ನಾವೆಲ್ಲ ಒಗ್ಗಟ್ಟಾಗಿ ಇದ್ದೇವೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿಯವರು ವರ್ಷಾಂತ್ಯಕ್ಕೆ ಸರ್ಕಾರ ಬದಲಾಗುತ್ತೆ ಎಂಬ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಸತ್ಯ ಅಂತ ಹೇಳುತ್ತಿದ್ದಾರೆ. ಅದು ಅವರ ಭ್ರಮೆ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅದರ ಬಗ್ಗೆ ನಾವು ಏನ್ ಮಾತಾಡುವುದಿಲ್ಲ. ನಾವು ಎಲ್ಲಾ ಶಾಸಕರು ಒಗ್ಗಟ್ಟಾಗಿ ಇದ್ದೇವೆ. ಕೆಲವರು ಸಚಿವರು ಶಾಸಕರ ಕೈಗೆ ಸಿಗುವುದಿಲ್ಲ ಎಂದು ಹೇಳ್ತಿದ್ದಾರೆ. ಅಂತಹ ದೂರುಗಳು ನನಗೆ ಬಂದಿಲ್ಲ. ಇನ್ನು ಶಾಸಕ ಬಿ ಆರ್ ಪಾಟೀಲ ಕೆಲ ಸಮಸ್ಯೆಗಳಲ್ಲಿ ಸಿಲುಕಿದ್ದಾರೆ ಅವರನ್ನು ಕರೆದು ಸಿಎಂ ಮಾತಾಡಿದ್ದಾರೆ ಎಲ್ಲವೂ ಸರಿ ಹೋಗುತ್ತದೆ ಎಂದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



