ಮೈಸೂರು: ನನ್ನನ್ನು ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಪಕ್ಷ ಸಂಘಟನೆಯಿಂದ ದೂರ ಉಳಿದಿರುವ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿ ಕ್ರಿಯಿಸಿ, ಈಗ ನಾನು ನನ್ನ ಕ್ಷೇತ್ರದ ಕಡೆ ಗಮನ ಕೊಡು ತ್ತಿದ್ದೇನೆ. ನನ್ನ ಕ್ಷೇತ್ರದಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಹೀಗಾಗಿ, ಪಕ್ಷದ ಸಂಘಟನೆ ಕಡೆ ಗಮನ ಕೊಟ್ಟಿಲ್ಲ ಎಂದರು. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ವಿಜಯೇಂದ್ರ ಬಿಜೆಪಿ ಸಂಘಟನೆ ಮಾಡುತ್ತಿದ್ದಾರೆ. ಅವರವರ ಪಕ್ಷವನ್ನು ಅವರು ಸಂಘಟನೆ ಮಾಡಿಕೊಳ್ಳು ತ್ತಿದ್ದಾರೆ. ಚುನಾವಣೆ ಬಂದಾಗ ಒಟ್ಟಾಗಿ ಕೂತು ಕೆಲಸ ಮಾಡುತ್ತಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



