ಬಾಲಿವುಡ್ ನಟ ಸೋನು ಸೂದ್ ಅವರು ಹಾವೊಂದನ್ನು ಬರಿಗೈಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ಸೋನು ಸೂದ್ ತಮ್ಮ ಮನೆಯ ಬಳಿ ಬಂದ ಹಾವನ್ನು ಎಚ್ಚರಿಕೆಯಿಂದ ಚೀಲದೊಳಗೆ ಇರಿಸಿದ್ದಾರೆ.ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಹರ ಹರ ಮಹಾದೇವ್ ಎಂಬ ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ.
ಇದಕ್ಕಿದ್ದಂತೆ ತಮ್ಮ ಅಪಾರ್ಟ್ ಮೆಂಟ್ ಆವರಣದೊಳಗೆ ಪ್ರವೇಶಿಸಿದ ವಿಷ ರಹಿತ ಕೇರೆ ಹಾವನ್ನು ಸೋನು ಸೂದ್ ಬರಿಗೈಯಲ್ಲಿಯೇ ರಕ್ಷಿಸಿದ್ದು, ತದನಂತರ ಅದನ್ನು ನಂತರ ತಮ್ಮ ಬಳಿ ಕೆಲಸ ಮಾಡುತ್ತಿರುವ ಯುವಕರಿಗೆ ಹಾವನ್ನು ಹತ್ತಿರದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲು ಸೂಚಿಸಿದ್ದಾರೆ.ಹಾವುಗಳ ಬಗ್ಗೆ ಜಾಗರೂಕರಾಗಿರಲು ಅವರು ಸಲಹೆ ನೀಡಿದ್ದಾರೆ. ಮನೆಗಳು ಹಾವುಗಳು ಬಂದಾಗ ತಜ್ಞರನ್ನು ಕರೆಸಿ ಅವುಗಳನ್ನು ಹಿಡಿಯಬೇಕು ಎಂದು ಹೇಳಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



