ಹಾಸನ: ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆ ಆಗಿರುವ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ ಅಧಿಕೃತವಾಗಿ ಆಹ್ವಾನ ನೀಡಿ ಸನ್ಮಾನಿಸಲಾಯಿತು. ದಸರಾ ಆಚರಣೆ ವಿಶೇಷಾಧಿಕಾರಿ, ಮೈಸೂರು ಜಿಲ್ಲಾಧಿಕಾರಿ ಸೇರಿ ಹಲವು ಅಧಿಕಾರಿಗಳ ತಂಡ ಇಂದು ಹಾಸನದ ಡಬಲ್ ಟ್ಯಾಂಕ್ ಬಳಿ ಇರುವ ಬಾನು ಮುಷ್ತಾಕ್ ಮನೆಗೆ ಭೇಟಿ ನೀಡಿದರು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸರ್ಕಾರದ ಪರವಾಗಿ ದಸರಾ ಆಹ್ವಾನ ಪತ್ರಿಕೆ ನೀಡಿ ಮೈಸೂರಿಗೆ ಆಗಮಿಸಿ ದಸರಾ ಉದ್ಘಾಟಿಸಬೇಕಾಗಿ ಮನವಿ ಮಾಡಿದರು. ಇದೆ ವೇಳೆಕುಟುಂಬ ಸಮೇತರಾಗಿ ದಸರಾಕ್ಕೆ ಬರಬೇಕೆಂದು ಆಹ್ವಾನಿಸಿದ ಮೈಸೂರು ಡಿ.ಸಿ ಲಕ್ಷ್ಮಿಕಾಂತರೆಡ್ಡಿ, ಬಳಿಕ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಸ್ವಾಗತಿಸಿದ ಜಿಲ್ಲಾಡಳಿತದ ಆಹ್ವಾನವನ್ನು ಬಾನು ಮುಷ್ತಾಕ್ ಅವರು ಒಪ್ಪಿಕೊಂಡು ಸ್ವೀಕರಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







