ಹಾಸನ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 10ಕ್ಕೆ ಏರಿಕೆಯಾಗಿದೆ.ನಿನ್ನೆ ರಾತ್ರಿ ಸಂಭವಿಸಿದ ಟ್ರಕ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್ ಎಂಬ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ಹಾಸನ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.ಕೃಷ್ಣ ಬೌರೇಗೌಡ ಅವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಮಾತುಕತೆ ನಡೆಸಿದರು ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.ಇದಕ್ಕು ಮುನ್ನ ಕೃಷ್ಣ ಬೈರೇಗೌಡ ಅವರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ವೇಳೆ, ಜನರು ಪರಿಹಾರ ಕಡಿಮೆ ಎಂಬ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದಿಂದ ಘೋಷಿಸಲಾಗಿರುವ ಐದು ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಜನ ಹೇಳಿದ್ದು, ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.ಜನರನ್ನು ಸಮಾಧಾನಪಡಿಸಿದ ಸಚಿವರು, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







