ನವದೆಹಲಿ, ಮೇ 25, 2025: ಪಿಎಂ ಇ-ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ಸಂಜೆ ದೆಹಲಿಯಲ್ಲಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ದೆಹಲಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಭೇಟಿಯಲ್ಲಿ ತೆಲಂಗಾಣ ಸಿಎಂ, ಉನ್ನತ ಅಧಿಕಾರಿಗಳು ಮತ್ತು ಸಂಸದರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಹೈದರಾಬಾದ್‌ಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಗಾಗಿ ರೇವಂತ್ ರೆಡ್ಡಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕುಮಾರಸ್ವಾಮಿ, ಮುಂದಿನ ಹಂತದಲ್ಲಿ ಹೆಚ್ಚಿನ ಬಸ್‌ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಿದರು.
ಅಲ್ಲದೆ, ತೆಲಂಗಾಣಕ್ಕೆ ಭೇಟಿ ನೀಡುವಂತೆ ಸಿಎಂ ರೇವಂತ್ ರೆಡ್ಡಿ, ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದರು. ಇದಕ್ಕೆ ಒಪ್ಪಿಗೆ ನೀಡಿದ ಸಚಿವರು, ಆದಷ್ಟು ಬೇಗ ತೆಲಂಗಾಣಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.
ಈ ಭೇಟಿಯು ತೆಲಂಗಾಣದ ಸಾರಿಗೆ ವ್ಯವಸ್ಥೆಯನ್ನು ಪರಿಸರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



