ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ. ದಾವಣ ಗೆರೆ ತಾಲೂಕಿನ ನಾಗರಕಟ್ಟೆ ನಿವಾಸಿ ಮಂಜಾ ನಾಯ್ಡ್ (31) ಆಟೋ ಓಡಿಸುತ್ತಿ ದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇನ್ನು ದಾವಣಗೆರೆ ರೇಲ್ವೆ ನಿಲ್ದಾಣ ಬಳಿ ಆಟೋದಲ್ಲಿ ಕುಳಿತಲ್ಲಿಯೇ ಚಾಲಕ ಎಸ್.ಸಂಗಪ್ಪ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡದ ಮೂಲ್ಕಿ ಬಳಿಯ ನಿವಾಸಿ, ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಸೋಮವಾರ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದು ಹೃದಯಾಘಾತ ವಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿಯ ಪುಟ್ಟಸ್ವಾಮಿ (55) ಜಮೀನಿನಿಂದ ಮೇಕೆಗಳಿಗೆ ಮೇವು ತಂದಿದ್ದು, ನೀರು ಕುಡಿಯುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರಿನ ಕರೀಗೌಡ (65) ಇದ್ದಕ್ಕಿದ್ದಂತೆ ಮನೆಯಲ್ಲಿ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಬೆಂಗಳೂರಲ್ಲಿ ಹಾವೇರಿಯ ಹನುಮಂತಪ್ಪ ಎಲಿಗಾರ್ (31) ಮೃತಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



