ಬೆಂಗಳೂರು: ರಾಜ್ಯದ ವಿವಿಧೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಯಾದಗಿರಿ, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಗದಗ ಸೇರಿ 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಅರ್ಭಟ ಮುಂದುವರಿದಿದೆ. ಮಳೆಯಿಂದಾಗಿ ಒಂದೆಡೆ ರೈತರ ಮೋಗದಲ್ಲಿ ಸಂತಸ ಉಂಟಾದರೆ ಮತ್ತೊಂದೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 3 ದಿನಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರಸ್ತಕ ಬೆಳೆಗೆ ಅನುಕೂಲವಾಗಲಿದೆ. ಇನ್ನೂ ಒಂದು ವಾರ ನಿರಂತರ ಮಳೆಯಾಗುವ ಸಾಧ್ಯತೆಗಳಿವೆ. ವಡಗೇರಾ ತಾಲೂಕಿನ ಬಬಲಾದ ಗ್ರಾಮ ಜಲಾವೃತಗೊಂಡಿದ್ದು, 15ಕ್ಕೂ ಹೆಚ್ಚು ಮನೆಯೊಳಗೆ ನೀರು ನುಗ್ಗಿದ ಹಿನ್ನಲೆ ನಿವಾಸಿಗಳು ಪರದಾಡುವಂತಾಗಿದೆ. ಇನ್ನುಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಳಚೆಯಲ್ಲಿ 4 ವರ್ಷದ ಬಳಿಕ ಮತ್ತೆ ಭೂಕುಸಿತವಾಗಿದ್ದು, ಯಾವುದೇ ಅನಾಹುತ ನಡೆದಿಲ್ಲ. ಹೊಸಕುಂಬ್ರಿಯ ಬಳಿ ಪದೇಪದೇ ಕುಸಿತವಾಗುತ್ತಿರುವ ಕಾರಣ ಜನರಲ್ಲಿ ಆತಂಕ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನವರೆಗೆ ಒಟ್ಟು 28 ಮಿಮೀ ಮಳೆ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



