ಉತ್ತರಕಾಶಿ: ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.ರಕ್ಷಣಾ (PRO) ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ, ಡೆಹ್ರಾಡೂನ್ ದುರಂತದ ಪ್ರಮಾಣ ಮತ್ತು ಸೇನೆಯ ತಕ್ಷಣದ ಕಾರ್ಯಾಚರಣೆಯನ್ನು ದೃಢಪಡಿಸಿದರು.
ಖೀರ್ ಗಡ್, ಧರಾಲಿಯಲ್ಲಿ ಸಂಭವಿಸಿದ ವಿನಾಶಕಾರಿ ಮಣ್ಣಿನ ಕುಸಿತದ ಹಿನ್ನೆಲೆಯಲ್ಲಿ, 14 RAJRIF ನ ಕಮಾಂಡಿಂಗ್ ಆಫೀಸರ್ ಕರ್ನಲ್ ಹರ್ಷವರ್ಧನ್ ಅವರು ವೈಯಕ್ತಿಕವಾಗಿ 150 ಸಿಬ್ಬಂದಿಯನ್ನು ನಿರ್ಣಾಯಕ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಆರಂಭದಲ್ಲಿ ಕಣ್ಮರೆಯಾಗಿದ್ದ 11 ಸೇನಾ ಸಿಬ್ಬಂದಿಗಳಲ್ಲಿ ಇಬ್ಬರು ಸುರಕ್ಷಿತವಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇದುವರೆಗೆ 20 ನಾಗರಿಕರನ್ನು ಸಹ ರಕ್ಷಿಸಲಾಗಿದೆ. ಭರದಿಂದ ರಕ್ಷಣಾ ಕಾರ್ಯಾಚರಣೆ ಸಾಗಿದೆ. ಪ್ರತಿಕೂಲ ಹವಾಮಾನ ಮತ್ತು ಸಂಪರ್ಕ ಕಡಿತದ ಸವಾಲಿನ ನಡುವೆ ಸೇನೆಯ ಬದ್ಧತೆಯನ್ನು ಅವರು ಶ್ಲಾಘಿಸಿದ್ದಾರೆ.
ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು ಹರಿಯುವುದರೊಂದಿಗೆ ಭಾರಿ ಆತಂಕ ಸೃಷ್ಟಿಯಾಯಿತು. ಜನರು ಭಯದಿಂದ ಕಿರುಚಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಹರ್ಸಿಲ್ ಸೇನಾ ಶಿಬಿರದ ಮುಂಭಾಗದಲ್ಲಿರುವ ಹರ್ಸಿಲ್‌ನಲ್ಲಿರುವ ಸೇನಾ ಘಟಕದ ಬಳಿ ಮಂಗಳವಾರ ಸಂಜೆ ಎರಡನೇ ಮೇಘಸ್ಫೋಟ ಸಂಭವಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



