ಹೈಕಮಾಂಡ್‌ಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ರವಾನೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್‌ಗೆ ಶುಕ್ರವಾರವೇ ಪಟ್ಟಿರವಾನಿಸಿದ್ದೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ನೇತೃತ್ವದ ನಿಯೋಗ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದೆ. ಎಲ್ಲರ ಅಭಿಪ್ರಾಯ ಹಾಗೂ ಪಕ್ಷದ ಆಂತರಿಕ ಸಮೀಕ್ಷೆ ಅನುಸಾರ ಹೈಕಮಾಂಡ್‌ಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಅಂತಿಮವಾಗಿ ಅಭ್ಯರ್ಥಿಯನ್ನು ಅವರೇ ಆಯ್ಕೆ ಮಾಡುತ್ತಾರೆ ಎಂದರು
