ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿ ಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದ್ದು, ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು ಎಂದು ಸೂಚಿಸಿದೆ. ಈ ಮಧ್ಯೆ, ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆಯನ್ನು ನಡೆಸದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ ಪಾಟೀಲ್ ತಿಳಿಸಿದ್ದಾರೆ. ತಾಂತ್ರಿಕ ದೋಷ ಮತ್ತು ಸರ್ವರ್ ಸಮಸ್ಯೆಯಿಂದಾಗಿ ದತ್ತಾಂಶ ಸಂಗ್ರಹಣೆಗೆ ತೊಂದರೆಯಾಗುತ್ತಿದೆ ಎಂದು ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದ ಬೆನ್ನಲ್ಲೆ ಸಚಿವರು ಮಾತನಾಡಿದ್ದು ಇಂದು ಪರಿಸ್ಥಿತಿ ಸುಧಾರಿಸಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







