ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಷ್ಕರ ಮುಂದುವರಿಸಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಂಗಳವಾರ ಎಚ್ಚರಿಸಿದೆ.ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನಾಯ್ಯಮೂರ್ತಿ ವಿಭು ಬಕ್ರು, ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಹೈಕೋರ್ಟ್ ಮುಷ್ಕರ ನಡೆಸಬಾರದೆಂದು ಆದೇಶ ನೀಡಿದ್ದರೂ, ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಜಾರಿಯಾಗಿದ್ದರೂ ಮುಷ್ಕರ ನಡೆಸುವುದು ಕಾನೂನು ಬಾಹಿರ. ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.ಪ್ರಸ್ತುತ ನೀವು ನಡೆಸುತ್ತಿರುವ ಮುಷ್ಕರ ಕಾನೂನುಬಾಹಿರ. ನಿಮಗೆ ಸಮಸ್ಯೆಗಳಿದ್ದರೆ, ನೀವು ಸರ್ಕಾರದೊಂದಿಗೆ ಮಾತುಕತೆ ನಡೆಸಬಹುದು. ನೀವು ಸಾರ್ವಜನಿಕರಿಗೆ ತೊಂದರೆ ಕೊಡಲು ಸಾಧ್ಯವಿಲ್ಲ. ಆದರೆ ಒಕ್ಕೂಟಗಳು ಮಾಡುತ್ತಿರುವುದು ಅದನ್ನೇ. ಸಾರ್ವಜನಿಕರಿಗೆ ಈ ರೀತಿಯಲ್ಲಿ ಅನಾನುಕೂಲತೆಯನ್ನುಂಟುಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ ಅವರು, ಈ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಎಸ್ಮಾ ಜಾರಿಯಾದರೂ ಮುಷ್ಕರ ನಡೆಸುವುದು ಕಾನೂನುಬಾಹಿರ ಎಂದು ಹೇಳಿ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಎರಡು ದಿನ ವಿಸ್ತರಣೆ ಮಾಡಿ ಆಗಸ್ಟ್ 7ಕ್ಕೆ ವಿಚಾರಣೆಯನ್ನು ಮುಂದೂಡಿತು.ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಜೆಎಸಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಅವರು, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ. ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



