ಹೊಳಲ್ಕೆರೆ: ಮಾರುಕಟ್ಟೆಯಲ್ಲಿ ಬೆಳೆದು ನಿಂತ ಬೆಳೆಗಳಿಗೆ ಗೊಬ್ಬರ ಯೂರಿಯಾ ಸಿಗದೆ ರೈತರು ಪರದಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ರೈತರಿಗೆ ಸಮರ್ಪಕ ಗೊಬ್ಬರ ಪೂರೈಕೆ ಮಾಡುವ ಬಗ್ಗೆ ಸರ್ಕಾರ ಕ್ರಮ ವಹಿಸಬೇಕೇಂದು ಒತ್ತಾಯಿಸಿದ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಪ್ರವಾಸಿ ಮಂದಿರದಿಂದ ಗಣಪತಿ ವೃತ್ತದವರೆಗೆ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಹೊಳಲ್ಕೆರೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ರಸಾಯನಿಕ ಗೊಬ್ಬರ ಯೂರಿಯಾ ಇಲ್ಲದೆ ತಾಲ್ಲೂಕಿನ ರೈತರಿಗೆ ಬಹಳ ತೊಂದರೆಯಾಗಿದೆ ಸಾಲ ಸೂಲ ಮಾಡಿ ಬಿತ್ತನೆ ಮಾಡಿದ್ದಾರೆ ರಾಸಯನಿಕ ಗೊಬ್ಬರ ಸಿಗದೆ ರೈತರು ಕಂಗಾಲಾಗಿದ್ದಾರೆ. ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ಅಡಚಣೆಯಾಗಿದೆ ಹಾಗಾಗಿ ಸಮರ್ಪಕ ಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಸೂರಪ್ಪ ಮಾತನಾಡಿ, ರಾಜ್ಯದಲ್ಲಿ ಗೊಬ್ಬರ ಸಮಸ್ಯೆ ಇದ್ದರೂ ಸ್ಥಳೀಯ ಶಾಸಕರು ಹೊಳಲ್ಕೆರೆಯಲ್ಲಿ ಗೊಬ್ಬರ ಯಾರಿಯಾ ಸರಿಯಾಗಿ ದಾಸ್ತಾನು ಮಾಡಿಲ್ಲ. ಕೃಷಿಕ ರೈತರ ಬಗ್ಗೆ ಸ್ಥಳೀಯ ಶಾಸಕರಿಗೆ ಕಾಳಜಿ ಇಲ್ಲ. ಸರ್ಕಾರದ ಮೇಲೆ ಒತ್ತಡ ಹಾಕಿ ತಾಲ್ಲೂಕಿಗೆ ಸಮರ್ಪಕವಾಗಿ ಗೊಬ್ಬರ ಯೂರಿಯಾ ಪೂರೈಕೆ ಮಾಡಿಸಬೇಕೇಂದು ಆಗ್ರಹಿಸಿದರು.ತಹಸೀಲ್ದಾರ್ ಬೀಬಿ ಫಾತೀಮಾ ರೈತರ ಮನವಿ ಸ್ವೀಕರಿಸಿ ಮಾತನಾಡಿ, ತಾಲ್ಲೂಕಿನ ರೈತರ ಹಿತದೃಷ್ಟಿಯಿಂದ ಎರಡು ತಿಂಗಳ ಮೊದಲೇ ಗೊಬ್ಬರ ಯೂರಿಯಾ ದಾಸ್ತಾನು ಮಾಡಲು ಅಂಗಡಿಗಳಿಗೆ ಮಾಹಿತಿ ನೀಡಿದ್ದೆ. ಬೆಳೆಗಳ ಬಿತ್ತನೆಗೆ ಹಿಂದೆ ಮುಂದೆ ಅಗಿರುವ ಹಿನ್ನೆಲೆಯಲ್ಲಿ ದಾಸ್ತಾನು ಮಾಡಿದ ಗೊಬ್ಬರ ಇನ್ನೂ ಖಾಲಿಯಾಗಿಲ್ಲ. ಸಕಾಲದಲ್ಲಿ ಎಲ್ಲಾ ರೈತರಿಗೆ ಗೊಬ್ಬರ ಸಿಕ್ಕುವಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಎಷ್ಟೇ ಗೊಬ್ಬರ ಬೇಕಾದರೂ ರೈತರು ಪಡೆದ ಕೊಳ್ಳಬಹುದು ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



