ಹೊಳಲ್ಕೆರೆ : ಹೊಸದಾಗಿ ಶಾಸಕ ಆದಾಗ ಇಲ್ಲಿ ರಸ್ತೆಗಳು ಅದ್ವಾನವಾಗಿದ್ದವು. ಹೆಚ್.ಡಿ.ದೇವೇಗೌಡ, ಜೆ.ಹೆಚ್.ಪಟೇಲ್ ಇವರುಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರದಲ್ಲಿ ಹಣವಿರಲಿಲ್ಲ. ಅಂತಹ ಕಷ್ಟದ ಕಾಲದಲ್ಲಿಯೇ ಅನುದಾನ ತಂದು ಭರಮಸಾಗರದ ಎಲ್ಲಾ ಹಳ್ಳಿಗಳಲ್ಲಿಯೂ ರಸ್ತೆ ಮಾಡಿಸಿದರ ಪರಿಣಾಮವಾಗಿ ಜನ ರಸ್ತೆ ರಾಜ ಎನ್ನುವ ಬಿರುದು ನೀಡಿ ಎರಡನೆ ಬಾರಿಗೂ ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆಂದು ಶಾಸಕ ಡಾ.ಎಂ.ಚಂದ್ರಪ್ಪ ಸ್ಮರಿಸಿದರು.ತಾಲ್ಲೂಕಿನ ಮದ್ದೇರು ಗ್ರಾಮದಲ್ಲಿ ಐವತ್ತು ಲಕ್ಷ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 367 ಕೋಟಿ ರೂ.ಗಳನ್ನು ಖರ್ಚು ಮಾಡಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸಲಾಗುವುದು. ಎಲ್ಲಾ ಕಡೆ ಸಿ.ಸಿ.ರಸ್ತೆಯಾಗಿದೆ. ಮಳೆ ನೀರು ವ್ಯರ್ಥವಾಗಿ ಹರಿದು ಹೋಗಬಾರದೆಂದು ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದೇನೆ. ಎಲ್ಲಾ ಊರುಗಳಲ್ಲಿಯೂ ಶಾಲೆಗಳನ್ನು ತೆರೆಯಲಾಗಿದೆ. ಗುಡ್ಡ ಕಟ್ ಮಾಡಿ ಚತುಷ್ಪಥ ರಸ್ತೆಗಳನ್ನು ಮಾಡಿಸಿದ್ದೇನೆ. ನ್ಯಾಯಾಧೀಶರಿಗೆ ವಸತಿ ಗೃಹಗಳು, ಪಾಲಿಟೆಕ್ನಿಕ್, ಐಟಿಐ. ಕಾಲೇಜು, ಮುರಾರ್ಜಿದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆ, ಗೆಸ್ಟ್ ಹೌಸ್ಗಳನ್ನು ಕಟ್ಟಿಸಿದ್ದೇನೆ. ಇದಕ್ಕಿಂತ ಇನ್ನೇನು ಅಭಿವೃದ್ದಿ ಕೆಲಸಗಳಾಗಬೇಕೆಂದು ಜನತೆಯನ್ನೇ ಪ್ರಶ್ನಿಸಿದರು..?
ಜನಪ್ರತಿನಿಧಿಗಳಿಗೆ ಶಕ್ತಿ, ಯೋಗ್ಯತೆಯಿದ್ದರೆ ಸರ್ಕಾರದಲ್ಲಿ ಹೋರಾಟ ಮಾಡಿ ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಮಾಡಿಸಬಹುದು. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಎಲ್ಲಿ ಯಾವ ಕೆಲಸ ಮಾಡಿದರೆ ಜನರಿಗೆ ಒಳ್ಳೆಯದಾಗುತ್ತದೆಂದು ಸದಾ ಆಲೋಚನೆ ಮಾಡುವ ರಾಜಕಾರಣಿ ನಾನು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್, ದಾಸಯ್ಯನಹಟ್ಟಿ ರಮೇಶ್, ಕಲ್ಲಜ್ಜ, ಚಂದ್ರಣ್ಣ, ಹನುಮಂತಪ್ಪ, ಸಿದ್ದಲಿಂಗಪ್ಪ, ರಾಜಣ್ಣ,
ವೀರಭದ್ರಣ್ಣ ಹಾಗೂ ಗ್ರಾಮದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







