ಮನೆ ಮನೆಗೆ ಇ-ಖಾತಾ ಅಭಿಯಾನದ ಮೂಲಕ ಜನರ ಮನೆ ಬಾಗಿಲಿಗೆ ಅವರ ಆಸ್ತಿ ಖಾತಾ ದಾಖಲೆಗಳನ್ನು ತಲುಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಹೊಸ ಇತಿಹಾಸ ಬರೆದಿದೆ. ಆ ಮೂಲಕ ತಮ್ಮ ಆಸ್ತಿ ದಾಖಲೆ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದ ಬೆಂಗಳೂರು ನಗರದ ನಾಗರೀಕರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ ಮಾಡಿದೆ.
ಇ-ಖಾತಾ ಅಭಿಯಾನ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಸಚಿವರಾದ ಕೃಷ್ಣ ಭೈರೇಗೌಡ ಅವರ ಸ್ವಕ್ಷೇತ್ರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲವು ಫಲಾನುಭವಿಗಳಿಗೆ ಅವರ ಆಸ್ತಿ ಇ-ಖಾತಾ ದಾಖಲೆಗಳನ್ನು ವಿತರಣೆ ಮಾಡಲಾಯಿತು.
ದಿನಾಂಕ 03.10.2024 ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಈಗಿನ ಗ್ರೇಟರ್ ಬೆಂಗಳೂರು) ಸಾರ್ವಜನಿಕರಿಗೆ ಇ-ಖಾತಾ ನೀಡುವ ಬೃಹತ್ ಕಾರ್ಯ ಪ್ರಾರಂಭವಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ 20,95,333 ಸ್ವತ್ತುಗಳ ಪೈಕಿ ದಿನಾಂಕ 27.06.2025 ವರೆಗೆ ಒಟ್ಟು 5,34,674 ಸ್ವತ್ತುಗಳಿಗೆ (25.5%) ಖಾತಾದಾರರು ಅಂತಿಮ ಇ-ಖಾತಾ ಪಡೆದಿರುತ್ತಾರೆ.
ಯಲಹಂಕ ವಲಯದಲ್ಲಿ ಒಟ್ಟು 2,28,146 ಸ್ವತ್ತುಗಳ ಪೈಕಿ 71,055 ಸ್ವತ್ತುಗಳಿಗೆ (30%) ಅಂತಿಮ ಇ-ಖಾತಾವನ್ನು ನೀಡಲಾಗಿದೆ. ಬ್ಯಾಟರಾಯನಪುರ ವಿಭಾಗದಲ್ಲಿನ ಒಟ್ಟು 1,81,135 ಸ್ವತ್ತುಗಳ ಪೈಕಿ 51,289 (28.31%) ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಇ-ಖಾತಾ ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ.
ಇದೇ ವೇಳೆ ಕೋಡಿಗೆಹಳ್ಳಿಯ ಸಹಕಾರನಗರ ಮೈದಾನಲ್ಲಿ ಭಾನುವಾರ ಇ-ಖಾತಾ ಮೇಳ ನಡೆದಿದ್ದು, ಆಸ್ತಿ ಮಾಲೀಕರು ತಮ್ಮ ಆಸ್ತಿಯ ಅಗತ್ಯ ದಾಖಲೆಗಳನ್ನು ಒದಗಿಸಿ ಸ್ಥಳದಲ್ಲೇ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಮೇಳದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. 1679 ಅರ್ಜಿಗಳ ಪ್ರಕ್ರಿಯೆ ಪೂರ್ಣಗೊಸಲಾಯಿತು. ಈ ಪೈಕಿ 677 ಅಂತಿಮ ಇ-ಖಾತಾಗಳನ್ನು ಸ್ಥಳದಲ್ಲೇ ವಿತರಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



