ಹೊಸದುರ್ಗ: ದಾವಣಗೆರೆ ರೈತರು ಹಾಗೂ ಜನಪ್ರತಿನಿಧಿಗಳು ಹೊಸದುರ್ಗಕ್ಕೆ ಭದ್ರಾ ನೀರು ನೀಡಲು ವಿರೋಧ ಮಾಡಿದ ಹಿನ್ನಲೆ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಹಾಗೂ ರೈತ ಸಂಘಟನೆಗಳಿಂದ ಹೊಸದುರ್ಗ ಪಟ್ಟಣ ಸಂಪೂರ್ಣ ಬಂದ್ ಕರೆ ನೀಡಿವೆ. ಕಳೆದ ಎರಡು ದಿನಗಳ ಹಿಂದೆ ಹೊಸದುರ್ಗ ಶಾಸಕ ಬಿ.ಜಿ ಗೋವಿಂದಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಜೊತೆ ಸಭೆ ನಡೆಸಿ ರೈತರನ್ನು ಮನವೊಲಿಸುವ ಕೆಲಸ ಮಾಡಿದ್ರೂ, ಆದ್ರೆ ಮನವೊಲಿಕೆಯ ನಂತರವೂ ದಾವಣಗೆರೆ ರೈತರು ದಾವಣಗೆರೆ ಬಂದ್ ಗೆ ಕರೆ ನೀಡಿದ ಹಿನ್ನಲೆ ಅವರಿಗೆ ಸಾವಲಾಗಿ ಇಂದು ಹೊಸದುರ್ಗ ಬಂದ್ ಗೆ ಕರೆ ನೀಡಿದ್ರು. ಇಂದು ಬೆಳಗ್ಗೆಯಿಂದಲೇ ಹೊಸದುರ್ಗ ಪಟ್ಟಣದಲ್ಲಿ ಖಾಸಗಿ ಬಸ್ ಹಾಗೂ ಆಟೋ ಚಾಲಕರ ಸಂಘದಿಂದ ಸಂಚಾರ ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲ ನೀಡಿದ್ರೆ ಇತ್ತ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಮುಚ್ಚುವ ಮೂಲಕ ಹೊಸದುರ್ಗ ಜನತೆ ಬಂದ್ ಗೆ ಬೆಂಬಲ ನೀಡಿದ್ದಾರೆ. ಬಂದ್ ವೇಳೆ ಶಾಲಾ, ಕಾಲೇಜುಗಳು, ಆಸ್ಪತ್ರೆಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ. ಇನ್ನು ಸರ್ಕಾರಿ ಬಸ್ ಗಳು 10.30 ಗಂಟೆಯ ಮೇಲೆ ಹೋರಾಟದ ಸ್ವರೂಪ ನೋಡಿ ಬಸ್ ಸಂಚಾರ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬಂದ್ ಗೆ ಚಿತ್ರದುರ್ಗದಲ್ಲಿ ಸಹ ರೈತರು ಪ್ರತಿಭಟನೆ ನಡೆಸಲಿದ್ದು, ಬೆಳಗ್ಗೆ 11 ಗಂಟೆಗೆ ನಗರದ ವೀರಭದ್ರೇಶ್ವರ ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ನೀಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



