ಚಿತ್ರದುರ್ಗ : ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಶಿಲ್ಪಾ ಮುರಳೀಧರ್ ಪಟ್ಟಣದಲ್ಲಿರುವ ಪ್ರಮುಖ ಹೋಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ ಗಳಲ್ಲಿ ಸ್ವಚ್ಛತೆ ಸೇರಿದಂತೆ ಹೋಟೆಲ್ ರೂಲ್ಸ್ ನ ಬ್ರೇಕ್ ಮಾಡಿ ತಮಗಿಷ್ಟ ಬಂದಂತೆ ನಡೆಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದ ಹಿನ್ನಲೆ ಹೊಟೇಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೆ ವೇಳೆ ರವಿ ಹೋಟೆಲ್ ನಲ್ಲಿ ಸ್ವಚ್ಛತೆ ಇಲ್ಲದೆ ಅತಿಯಾದ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಹಿನ್ನಲೆ ಹೊಟೇಲ್ ಬಂದ್ ಮಾಡುವಂತೆ ಹೇಳಿದರು. ಜೊತೆಗೆ ಕೆಲ ಹೋಟೆಲ್ ಮಾಲೀಕರಿಗೆ ಸ್ವಚ್ಛತೆ ಸೇರಿದಂತೆ ಹೋಟೆಲ್ ರೂಲ್ಸ್ ನ ಫಾಲೋ ಮಾಡಿ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ವಾರ್ನಿಂಗ್ ಕೊಟ್ರು. ಇದೆ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್,ಉಪಾಧ್ಯಕ್ಷೆ ಕವಿತಾ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



