ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಭವ್ಯ ಮೆರವಣಿಗೆಗೆ ಸಜ್ಜು
ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಏ.14ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕೋಟೆ ಮುಂಭಾಗದಿಂದ ಭವ್ಯ ಮೆರವಣಿಗೆ ಆರಂಭವಾಗಲಿದೆ.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಹೊರಡುವ ಈ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನವನ್ನು ತಲುಪಲಿದೆ. ನಂತರ 11 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅಧಿಕೃತ ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗು ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.
ಎಲ್ಲಾ ಜಿಲ್ಲಾ ಅಧಿಕಾರಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿವಿಧ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.
