ಹೊಳಲ್ಕೆರೆ : ರೈತರು ಕಷ್ಟ ಅನುಭವಿಸಬಾರದೆಂದು ಎಲ್ಲಾ ಕಡೆ ಕೆರೆ ಕಟ್ಟೆ, ಚೆಕ್‍ಡ್ಯಾಂಗಳನ್ನು ಕಟ್ಟಿ ಅಂತರ್ಜಲ
ಅಭಿವೃದ್ದಿಪಡಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ಕುನುಗಲಿ ಗ್ರಾಮದಲ್ಲಿ 1.10 ಕೋಟಿ ರೂ.ವೆಚ್ಚದಲ್ಲಿ ಹುಲೇಮಳಲಿಯಿಂದ ಮಲ್ಕಾಪುರದವರೆಗೂ ನೂತನ ಡಾಂಬರ್ ರಸ್ತೆಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಮನುಷ್ಯತ್ವವಿರುವ ಶಾಸಕ ನಾನು. ಇನ್ನೊಬ್ಬರ ಕಷ್ಟ, ನೋವು ಅರ್ಥಮಾಡಿಕೊಂಡಿದ್ದೇನೆ. ಯಾರಿಂದಲೂ ಅರ್ಜಿ ಪಡೆದು ಏನನ್ನುಹೇಳಿಸಿಕೊಂಡಿಲ್ಲ. ರೈತರು, ಸಾರ್ವಜನಿಕರ ಜೀವನವನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕ್ಷೇತ್ರದ ಅಭಿವೃದ್ದಿಗೆಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಶಿವಪುರ, ಹೊಳಲ್ಕೆರೆಯಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಕಟ್ಟಿಸಿದ್ದೇನೆ.
ಸಮುದಾಯ ಭವನ,ಪುರಸಭೆ, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ, ಬಸ್‍ನಿಲ್ದಾಣ, ಶಾಲಾ-ಕಾಲೇಜು, ದೇವಸ್ಥಾನ, ಆಸ್ಪತ್ರೆಗಳನ್ನುಕಟ್ಟಿಸಿ ತಾಲ್ಲೂಕಿನಾದ್ಯಂತ ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ನಿರ್ಮಿಸಿದ್ದೇನೆ. ಗದ್ದಲ, ಗಲಾಟೆಗೆ ಎಲ್ಲಿಯೂ ಆಸ್ಪದಕೊಟ್ಟಿಲ್ಲ. ಅಟ್ರಾಸಿಟಿ ಕೇಸು ಯಾರ ಮೇಲೂ ದಾಖಲಾಗಿಲ್ಲ. ಎಲ್ಲಾ ಜಾತಿ ಜನಾಂಗದವರನ್ನು ನನ್ನವರೆಂದು ಪ್ರೀತಿಯಿಂದನಡೆಸಿಕೊಳ್ಳುತ್ತಿದ್ದೇನೆ. ಚುನಾವಣೆಯಲ್ಲಿ ಮತ ಹಾಕುವುದು ಒಂದು ನಿಮಿಷದ ಕೆಲಸ. ಐದು ವರ್ಷಗಳ ಕಾಲ ಯಾರು ನಿಮ್ಮ ಕಷ್ಟ-ಸುಖಗಳಿಗೆ ಸ್ಪಂದಿಸಿ ಅಭಿವೃದ್ದಿ ಕೆಲಸಗಳನ್ನು ಮಾಡಿಸುತ್ತಾರೆಂದು ಆಲೋಚಿಸಿ ಓಟು ನೀಡಿ ಎಂದು ಜನತೆಯಲ್ಲಿ ಮನವಿಮಾಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಷಣ್ಮುಖಪ್ಪ ಮಾತನಾಡಿ ಕಾಂಗ್ರೆಸ್ ಶಾಸಕರುಗಳೆ ನಮ್ಮ ಕ್ಷೇತ್ರ ಅಭಿವೃದ್ದಿಪಡಿಸಲುಅನುದಾನಸಿಗುತ್ತಿಲ್ಲವೆಂದು ಗೋಳಾಡುತ್ತಿರುವಾಗ ವಿರೋಧ ಪಕ್ಷದಲ್ಲಿರುವ ಶಾಸಕ ಡಾ.ಎಂ.ಚಂದ್ರಪ್ಪನವರು ಹೆಂಗೆ ಹಣ ತಂದು ಕ್ಷೇತ್ರದಲ್ಲಿದಿನನಿತ್ಯವೂ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡುತ್ತಿದ್ದಾರೆಂದರೆ ಆಶ್ಚರ್ಯವೆನಿಸುತ್ತದೆ.
ಸರ್ಕಾರ ಯಾವುದಿದೆಎನ್ನುವುದು ಮುಖ್ಯವಲ್ಲ. ಅನುದಾನ ತರುವ ಮಾರ್ಗ ಕಂಡುಕೊಂಡಿದ್ದಾರೆ. ಪ್ರತಿಯೊಂದು ಹಳ್ಳಿಗಳಲ್ಲಿಯೂ ಕೆರೆ ಕಟ್ಟೆ,ಚೆಕ್‍ಡ್ಯಾಂಗಳನ್ನು ಕಟ್ಟಿಸಿ ರೈತರ ಬಕುಕು ಹಸನುಗೊಳಿಸಿದ್ದಾರೆ. ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರೆ ಹತ್ತು ನಿಮಿಷದಲ್ಲಿಯೇಪರಿಹಾರ ಹುಡುಕುತ್ತಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಶಣ್ಣ, ಸದಸ್ಯರುಗಳಾದ ರೂಪ ಸುರೇಶ್, ಅಜ್ಜಣ್ಣ, ತಿಪ್ಪಣ್ಣ, ನಾಗಣ್ಣ, ಯತೀಶ್, ಪರಮೇಶಣ್ಣ,
ಮರುಳಸಿದ್ದಪ್ಪ, ಪುಣಜೂರು ಸ್ವಾಮಿಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪವನ್, ಗುತ್ತಿಗೆದಾರ ರಾಜಶೇಖರ್ ಹಾಗೂ ಗ್ರಾಮದ ಮುಖಂಡರುಗಳು ಈಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



