ಹೊಳಲ್ಕೆರೆ : ಸಿಕ್ಕಿರುವ ಅವಕಾಶವನ್ನು ಸಾರ್ವಜನಿಕರಿಗೆ ಧಾರೆ ಎರೆಯುವ ಮೂಲಕ ಸಮಾಜದ ಹಾಗೂ ಮಣ್ಣಿನ ಋಣ
ತೀರಿಸಬೇಕೆಂದು ಶಾಸಕ ಡಾ.ಎಂ.ಚಂದ್ರಪ್ಪ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ತಿಳಿಸಿದರು.
ಪ್ರವಾಸಿ ಮಂದಿರದ ಸಭಾಂಗಣದಲ್ಲಿ ನುಲಿಯ ಚಂದಯ್ಯನವರ ಜಯಂತಿ, 78 ನೇ ಸ್ವಾತಂತ್ರ್ಯೋತ್ಸವ, ಶ್ರೀಕೃಷ್ಣ ಜಯಂತಿ ಮತ್ತುದಿವಂಗತ ಡಿ.ದೇವರಾಜ ಅರಸುರವರ 110 ನೇ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿಮಾತನಾಡಿದರು.ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹಿರಿಯರನ್ನು ಸ್ಮರಿಸಿಕೊಳ್ಳವುದು ಪ್ರತಿಯೊಬ್ಬರ ಜವಾಬ್ದಾರಿ.
ಅಧಿಕಾರಿಗಳಲ್ಲಿ ಅಸಡ್ಡೆಯಿರಬಾರದು. ಕಾಳಜಿಯಿಲ್ಲದಿದ್ದರೆ ಯಾವ ದೇಶವು ಉದ್ದಾರವಾಗುವುದಿಲ್ಲ. ಒಂದು ಕಾಲದಲ್ಲಿ
ಬಡತನದಲ್ಲಿದ್ದ ಚೀನಾ ಈಗ ಅಮೇರಿಕಾ, ರಷ್ಯಾ ದೇಶವನ್ನು ಎದುರಿಸುವಷ್ಟು ಶಕ್ತಿಶಾಲಿಯಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ ಯಾವಅಧಿಕಾರಿಯೂ ತಪ್ಪಿಸಿಕೊಳ್ಳಬಾರದು. ಕಡ್ಡಾಯವಾಗಿ ಭಾಗವಹಿಸಬೇಕು. ಇಲ್ಲದಿದ್ದರೆ ಸೇವೆಯಿಂದ ಅಮಾನತ್ತುಗೊಳಿಸುವುದಾಗಿಶಾಸಕ ಡಾ.ಎಂ.ಚಂದ್ರಪ್ಪ ಎಚ್ಚರಿಸಿದರು.ತಹಶೀಲ್ದಾರ್ ಬೀಬಿ ಫಾತಿಮ, ಪುರಸಭೆ ಅಧ್ಯಕ್ಷ ವಿಜಯಸಿಂಹ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ,ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಿವಮೂರ್ತಿ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತಪ್ಪ, ಪುರಸಭೆ ಸದಸ್ಯರುಗಳು ವಿವಿದ ಇಲಾಖೆ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ
ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



