ನವದೆಹಲಿ:2022ರಲ್ಲಿ ಕದ್ರಿ ಮಂಜುನಾಥ ದೇಗುಲದಬಳಿ ನಡೆದಿದ್ದ ಸ್ಪೋಟದ ಸಂಚಿನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಆದರೆ ಈ ಆರೋಪಪಟ್ಟಿಯಲ್ಲಿ ಅದು ಧರ್ಮಸ್ಥಳ ಮಂಜುನಾಥ ದೇಗುಲ ಎಂದು ಪ್ರಸ್ತಾಪಿಸಿರುವುದರಿಂದ ಗೊಂದಲ ಉಂಟಾಗಿದೆ.2022ರ ನ.19ರಂದು ರಿಕ್ಷಾದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ತನಿಖೆ ವೇಳೆ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಫೋಟ ನಡೆಸುವ ಮೂಲಕ ಕೋಮುದ್ವೇಷ ಹಬ್ಬಿಸಲು ಐಸಿಸ್ ಸಂಚು ರೂಪಿಸಿತ್ತು ಎಂಬುದು ಬೆಳಕಿಗೆ ಬಂದಿತ್ತು. ಜೊತೆಗೆ ಕುಕ್ಕರ್ ಬಾಂಬ್ನ ಟೈಮರ್ ಅನ್ನು 90 ನಿಮಿಷಕ್ಕೆ ಸೆಟ್ ಮಾಡುವ ಬದಲು 9 ಸೆಕೆಂಡ್ಗೆ ತಪ್ಪಾಗಿ ಸೆಟ್ ಮಾಡಿದ್ದ ಕಾರಣ ಅದು ದೇಗುಲದ ಬಳಿ ತೆರಳುವ ಮೊದಲೇ ರಿಕ್ಷದಲ್ಲಿಯೇ ಸ್ಪೋಟಗೊಂಡಿತ್ತು.ಈ ಕುರಿತು ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿತ್ತು. ಇದೇ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇ.ಡಿ ಕೂಡಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿತ್ತು. ಪ್ರಕರಣ ಸಂಬಂಧ ಆರೋಪಿಗಳ ಖಾತೆಯಿಂದ 29176 ರು. ಜಪ್ತಿ ಮಾಡಲಾಗಿದೆ ಎಂದು ಇ.ಡಿ. ಮಾಹಿತಿ ನೀಡಿತ್ತು. ಜೊತೆಗೆ ಈ ಮಾಹಿತಿಯಲ್ಲಿ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಫೋಟ ಎಂದು ನಮೂದಿಸುವ ಬದಲು ಅದು ಧರ್ಮಸ್ಥಳ ಮಂಜುನಾಥ ಎಂದು ನಮೂದಿಸಿರುವ ಕಾರಣ, ಗೊಂದಲ ಉಂಟಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







