ಹೊಳಲ್ಕೆರೆ: ಶಕ್ತಿಶಾಲಿ ಕ್ಷಿಪಣಿಗಳನ್ನು ಹೊಂದಿರುವ ಭಾರತ ಬಲಿಷ್ಠ ರಾಷ್ಟ್ರಗಳ ಜೊತೆ ಪೈಪೋಟಿ ನೀಡುವಷ್ಟರಮಟ್ಟಿಗೆ ಬೆಳೆದಿದೆಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣನೆರವೇರಿಸಿ ಮಾತನಾಡಿದರು.ಹನ್ನೆರಡು ವರ್ಷಗಳಿಂದಲೂ ಹೊಳಲ್ಕೆರೆ ಶಾಸಕನಾಗಿದ್ದೇನೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡುಕ್ಷೇತ್ರದ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಉತ್ತಮ ಗುಣಮಟ್ಟದ ಶಾಲಾ-ಕಾಲೇಜು, ಹೈಟೆಕ್ಆಸ್ಪತ್ರೆ, ಸಮುದಾಯ ಭವನ, ಪುರಸಭೆ, ಕಂದಾಯ ಭವನ, ಸಿ.ಸಿ.ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಹಿರಿಯೂರಿನವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿರೂ.ಗಳನ್ನು ಖರ್ಚು ಮಾಡಲಾಗಿದೆ. ರೈತರ ಬದುಕು ಹಸನಾಗಬೇಕೆಂದು ಭದ್ರಾಜಲಾಶಯಕ್ಕೆ ಬಾಗಿನ ಅರ್ಪಿಸಿ ಬಂದಿದ್ದೇನೆ.
ಡಿಸೆಂಬರ್ ಒಳಗೆ ತಾಲ್ಲೂಕಿನ ಎಲ್ಲಾ 37 ಕೆರೆಗಳಿಗೆ ನೀರು ತುಂಬಿಸಲಾಗುವುದು. ಎಸ್.ಎಸ್.ಎಲ್.ಸಿ.ಯಲ್ಲಿ 625 ಕ್ಕೆ ಆರು ನೂರುಅಂಕ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಐದು ನೂರಕ್ಕೆ ಐದು ನೂರು ಅಂಕಗಳನ್ನು ಪಡೆಯುವ ಪ್ರತಿ ವಿದ್ಯಾರ್ಥಿಗೆ ತಲಾ ಒಂದುಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ಕೊಟ್ಟರು.ಹೊಳಲ್ಕೆರೆ ಪಟ್ಟಣ ಸೇರಿದಂತೆ ಮೂರು ಕಡೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆಯಲಾಗುವುದು. ಒಂದೊಂದು ಶಾಲೆಗೆ 10ಕೋಟಿ ರೂ.ಗಳನ್ನು ಖರ್ಚು ಮಾಡಿ ಗುಣಮಟ್ಟದ ಕಟ್ಟಡ ಕಟ್ಟಲಾಗುವುದು. ಡಾಂಬರ್ ರಸ್ತೆಗಳನ್ನು ಕಿತ್ತು ಸಿ.ಸಿ.ರಸ್ತೆಗಳ ನಿರ್ಮಾಣಕ್ಕೆ
850 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದೆಂದರು.ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಬಿ.ಎ.ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಮತ್ತು ಹತ್ತನೆ ತರಗತಿಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಐವತ್ತು ಸಾವಿರ ರೂ.ಗಳನ್ನು ನೀಡಿ ಶುಭ ಹಾರೈಸಿದರು.ತಾಲ್ಲೂಕಿನ ಎಂಟು ಟಾಪರ್ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ.ಗಳ ಬಹುಮಾನ ವಿತರಿಸಲಾಯಿತು.ತಹಶೀಲ್ದಾರ್ ಕೊರಲಗುಂದಿ ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಿಶ್ವನಾಥ, ಪುರಸಭೆಮುಖ್ಯಾಧಿಕಾರಿ ಫಿರೋಜ್ಖಾನ್
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಶಪ್ಪ, ಪುರಸಭೆಅಧ್ಯಕ್ಷ ವಿಜಯಸಿಂಹ ಖಾಟ್ರೋತ್ಉಪಾಧ್ಯಕ್ಷೆ ನಾಗರತ್ನ, ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







