ಚಿತ್ರದುರ್ಗ: ಆಗಸ್ಟ್ 16 ರಂದು ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ವಿಶೇಷ ಅಧಿವೇಶನ ಕರೆದಿದ್ದು, ಈ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಜಿಲ್ಲಾ ಸ್ವಾಭಿಮಾನಿ ಮಾದಿಗ ಮಹಾಸಭಾದ ಮುಖಂಡ ಮೋಹನ್ ಒತ್ತಾಯಿಸಿದ್ದಾರೆ.ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚಿರುವುದರಿಂದ ಶೇ.6% ರಿಂದ 8% ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಆಗಸ್ಟ್ 1ಕ್ಕೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಆದೇಶ ನೀಡಿ, ಒಂದು ವರ್ಷ ಕಳೆದಿದ್ದರ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಮಾದಿಗ ಮಹಾಸಭಾ ಹಾಗೂ ಇತರೆ ದಲಿತ ಸಮುದಾಯಗಳು ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಒಳ ಮೀಸಲಾತಿ ಜಾರಿ ವಿಚಾರವಾಗಿ ಸರ್ಕಾರ ಎಚ್ಚೆತ್ತುಕೊಂಡಿದೆ.
ನಿನ್ನೆ ಒಳ ಮೀಸಲಾತಿ ಜಾರಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ನಡೆಸಿದ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೂ ಸಹ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿದೆ. ಒಳ ಮೀಸಲಾತಿ ವಿಚಾರವಾಗಿ ಹಿಂದೆ ರಚನೆಯಾದ ಎಲ್ಲಾ ಆಯೋಗಗಳು ನೀಡಿದ ವರದಿ ಅನ್ವಯ ಮಾದಿಗ ಸಮುದಾಯ ಹೆಚ್ಚಿದೆ. ಆದ್ದರಿಂದ ಶೇ.6%ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಿವೆ. ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚಿರುವುದರಿಂದ ಶೇ. 6% ರಿಂದ 8% ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಹೇಳುತ್ತಾರೆ ಆದರೆ ಒಳ ಮೀಸಲಾತಿ ಜಾರಿಯಲ್ಲಿ ವಿಳಂಬ ಮಾಡುತ್ತಿದ್ದಾರೆ.ರಾಜ್ಯದಲ್ಲಿ ನ್ಯಾ.ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ ಹಾಗೂ ನ್ಯಾ.ನಾಗಮೋಹನ್ ದಾಸ್ ಆಯೋಗ ಎಲ್ಲವೂ ಸಹಾ ಕರ್ನಾಟಕದಲ್ಲಿ ಮಾದಿಗ ಮತ್ತು ಅದರ ಉಪ ಜಾತಿಗಳು ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ವಷ್ಟವಾಗಿ ಹೇಳಿವೆ. ಎಲ್ಲಾ ಆಯೋಗಗಳು ಸಹಾ ಮಾದಿಗ ಉಪ ಜಾತಿಗಳ ಗುಂಪಿಗೆ ಶೇ.6 ರಷ್ಟು ಮೀಸಲಾತಿ ನಿಗಧಿ ಮಾಡಿವೆ. ಹೀಗಾಗಿ ಸಿದ್ದರಾಮಯ್ಯ ರವರು ಮಾದಿಗ ಪಾಲಿನ ಶೇ.6 ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿ ಘೊಷಿಸಲಿ ಎಂದು ಒತ್ತಾಯಿಸಿದ್ದಾರೆ.
ಆಗಸ್ಟ್ 16 ರೊಳಗೆ ಒಳ ಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಲಿ. ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಸ್ವಾಭಿಮಾನಿ ಮಾದಿಗ ಮಹಾಸಭಾ ಹಾಗೂ ದಲಿತ ಸಂಘಟನೆಗಳು ಸೇರಿ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಶ್ರೀನಿವಾಸ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಪರ ಎಂದು ಬಾಯಿಯಲ್ಲಿ ಹೇಳುತ್ತಾರೆ ಹೊರತು ಕಾರ್ಯ ರೂಪಕ್ಕೆ ಬರುತ್ತಿಲ್ಲ, ಇಲ್ಲಿಯವರೆಗೆ ಒಳ ಮೀಸಲಾತಿ ನಮಗೆ ಮಾಡಲು ಅಧಿಕಾರ ಇಲ್ಲ ಎನ್ನುತ್ತಿದ್ದವರಿಗೆ ನ್ಯಾಯಾಲಯ ಆಧೇಶವನ್ನು ನೀಡಿ ನೀವು ಮಾಡಿ ಎಂದು ಹೇಳಿದೆ. ನಂತರ ಮುಖ್ಯಮಂತ್ರಿಗಳು ಆಯೋಗವನ್ನು ನೇಮಕ ಮಾಡಿ ವರದಿ ಬರಲಿ ಎಂದರು. ಈಗ ವರದಿಯೂ ಸಹಾ ಬಂದಿದೆ ಅದರೂ ಸಹ ಜಾರಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ತಾ.ಪಂ.ಮಾಜಿ ಸದಸ್ಯ ಜಯ್ಯಪ್ಪ, ಪ್ರಹ್ಲಾದ್, ಪರಶುರಾಮ್, ನಾಗರಾಜ್ ಸಿದ್ಧಾರ್ಥ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







