ಚಿತ್ರದುರ್ಗ: ಬಂಜಾರ ಸಮಾಜಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ
ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಕೋಲಂಬೋ, ಕೊರಚ, ಕೊರಮ, ಲಂಬಾಣಿ ಮತ್ತು ಭೋವಿ ಸಮಾಜ ಬಲಗೈ ಹಾಗೂ ಎಡಗೈ ಸಮುದಾಯಕ್ಕಿಂತ ಜಾಸ್ತಿಯಿದೆ.ಮಾದಿಗ ಸಮಾಜ ಶೈಕ್ಷಣಿಕ, ಆರ್ಥಿಕಸಾಮಾಜಿಕವಾಗಿಯೂ ಮುಂದಿದೆ. ಈ ದತ್ತಾಂಶವನ್ನು ಗಮನಿಸಿದಾಗ ಕೋಲಂಬೋ ಸಮಾಜ ಅತಿ ಹಿಂದುಳಿದಿದೆ. ಸೌಲಭ್ಯಗಳಿಂದವಂಚಿತರಾಗಿರುವ ಇತರೆ 59 ಜಾತಿಗಳನ್ನು ನಮ್ಮೊಟ್ಟಿಗೆ ಸೇರಿಸಿರುವುದರಿಂದ ಈ ಸಮಾಜಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು.ಸ್ಪರ್ಶ ಹಾಗೂ ಅಸ್ಪರ್ಶ ಕಾನೂನುಬಾಹಿರ ಪದಗಳೆಂದು ಸುಪ್ರೀಂಕೋರ್ಟ್ ಹೇಳಿದೆ. ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ.ದೋಷಪೂರಿತವಾಗಿರುವ ನಾಗಮೋಹನ್ದಾಸ್ ಆಯೋಗದ ವರದಿಯನ್ನು ವಿರೋಧಿಸಿ ಪ್ರತಿಭಟನಾಕಾರರು
ರಾಜ್ಯದ ಮುಖ್ಯಮಂತ್ರಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಜಿಲ್ಲಾಧ್ಯಕ್ಷ ಆರ್.ಗಿರೀಶ್ನಾಯ್ಕ, ವೈ.ಕುಮಾರ್, ಬಂಜಾರ ಸಮಾಜದಮುಖಂಡರುಗಳಾದ ವೀಣಬಾಯಿ
ಹಾಲನಾಯ್ಕ, ಬಸವರಾಜ್ನಾಯ್ಕ, ಶಿವನಾಯ್ಕ, ಮಾರುತೇಶ್, ಅನಂತಮೂರ್ತಿನಾಯ್ಕ ಇವರುಗಳು ಈ ಸಂದರ್ಭದಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







