ಚಿತ್ರದುರ್ಗ: ಚಿತ್ರದುರ್ಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನಲೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕ ಜಾಗೃತಿ ಜಾಥಾ ನಡೆಸಿದರು. ಜಾಗೃತಿ ಜಾಥಾಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ ನೀಡಿ ಮಾತನಾಡಿದ ಅವರು ಇಂದಿನ ಯುವ ಜನತೆ ಮಾದಕ ವ್ಯಸನದಿಂದ ದೂರ ಉಳಿಯಬೇಕು. ಸದೃಢ ಭಾರತಕ್ಕೆ ಯುವಜನತೆಯ ಶಕ್ತಿ ಮುಖ್ಯ ಜೊತೆಗೆ ಇಂತಹ ದುಶ್ಚಟಗಳ ವಿರುದ್ಧ ಸಾರ್ವಜನಿಕರು ಸಹ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಬಳಿಕ ನಗರದ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಡಿಸಿ ವೃತ್ತದವರೆಗೆ ಬೃಹತ್ ಜಾಥಾ ನಡೆಯಿತು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



