ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ)ಯಲ್ಲಿ ತಪ್ಪದೇ ಪ್ರತಿಯೊಬ್ಬರೂ ಭಾಗವಹಿಸಿ, ಅನುಸೂಚಿಯ ಧರ್ಮದ ಕಾಲಂನಲ್ಲಿ “ಇತರೇ” ಎಂದು ನೀಡಿರುವ ಕಾಲಂನಲ್ಲಿ “ವೀರಶೈವ ಲಿಂಗಾಯತ” ಎಂದು, ಹಾಗೇ ಜಾತಿಯ ಕಾಲಂನಲ್ಲಿ “ಲಿಂಗಾಯತ” ಅಥವಾ “ವೀರಶೈವ” ಅಥವಾ “ವೀರಶೈವ ಲಿಂಗಾಯತ” ಎಂದು ಮತ್ತು ಉಪಜಾತಿ ಕಾಲಂನಲ್ಲಿ ತಾವು ಸೇರಿದ ಉಪ ಜಾತಿಯ ಸಂಕೇತ ಸಂಖ್ಯೆಯನ್ನು ಖಚಿತಪಡಿಸಿಕೊಂಡು ಬರೆಸಬೇಕು. ಇವುಗಳ ಜೊತೆಗೆ ತಮ್ಮ ಕುಟುಂಬಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸ್ಪಷ್ಟವಾಗಿ ಗಣತಿದಾರರಿಗೆ ನೀಡಿ, ತಾವು ನೀಡಿದ ಮಾಹಿತಿಯನ್ನು ಸರಿಯಾಗಿ ದಾಖಲಿಸಿಕೊಂಡಿದ್ದಾರೆಯೇ ಎಂಬುದುನ್ನು ಖಚಿತಪಡಿಸಿಕೊಂಡು ಒಪ್ಪಿಗೆ ನೀಡುವುದು. ಆಯೋಗವು ಕೈಪಿಡಿಯನ್ನು ಬಿಡುಗಡೆ ಮಾಡಿದ ನಂತರ ಅಧಿಕೃತ ಮಾಹಿತಿಯನ್ನು ತಮ್ಮಗಳ ಗಮನಕ್ಕೆ ತರಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಮತ್ತು ಅವರ ಪತ್ನಿ ಆರತಿ ಮಹಡಿ ಶಿವಮೂರ್ತಿ ಮನವಿ ಮಾಡಿದ್ದಾರೆ.ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ, ನಾಡಿನ ಜನರೆಲ್ಲರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲು ಅನುವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಜಾತಿ ಪ್ರಮಾಣ ಪತ್ರಕ್ಕೂ ಸಮೀಕ್ಷೆಗೂ ಸಂಬಂಧವಿಲ್ಲ
ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಬರೆಸುವ ಮಾಹಿತಿಗೂ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಬಂಧವಿರುವುದಿಲ್ಲ. ನೈಜ ಜಾತಿಯನ್ನು ಶಾಲಾ ದಾಖಲಾತಿ ಇನ್ನಿತರೇ ದಾಖಲಾತಿಗಳನ್ನು ಪರಾಮರ್ಶಿಸಿದ ಬಳಿಕವಷ್ಟೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ನೈಜ ಜಾತಿಯನ್ನೇ ಸಮೀಕ್ಷೆಯಲ್ಲಿ ಬರೆಸಬೇಕು, ನಮ್ಮ ಸಮುದಾಯದ ನೈಜ ಸಂಖ್ಯೆ ಹೊರಹೊಮ್ಮಲು ಸಹಕರಿಸಬೇಕು. ಎಂದು ಸಮಸ್ತ ವೀರಶೈವ ಲಿಂಗಾಯತ ಸಮಾಜದ ಬಾಂಧವರಿಗೆ ಮಹಾಸಭಾದ ಪರವಾಗಿ ಮನವಿ ಮಾಡಿದರು.ಎಲ್ಲ ಜಾತಿ, ಸಮುದಾಯಕ್ಕೂ ನ್ಯಾಯ ದೊರಕುವ ರೀತಿಯಲ್ಲಿ ಸಮೀಕ್ಷೆಯನ್ನು ನಡೆಸುವಂತೆ ಮಹಾಸಭಾ ಸರ್ಕಾರಕ್ಕೆ ಮನವಿ ಮಾಡಿದೆ. ಅದೇ ರೀತಿ ಎಲ್ಲ ಪರಮಪೂಜ್ಯ ಸ್ವಾಮೀಜಿಗಳಿಗೂ ಈ ಸಂಬಂಧ ಏಕಮತ್ಯದಿಂದ ಮತ್ತು ಒಕ್ಕೊರಲಿನಿಂದ ಸಮೀಕ್ಷೆಯಲ್ಲಿ ನೈಜವಾದ ಜಾತಿ ಹೆಸರು ಬರೆಸುವಂತೆ ಮಹಾಸಭಾ ಮನವಿ ಮಾಡಿದೆ ಎಂದು ತಿಳಿಸಿದರು.ಮಹಾಸಭೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿ-ಗತಿಯ ಆಧಾರದಲ್ಲಿ ಸಮುದಾಯದ ಹಿಂದುಳಿದಿರುವಿಕೆ ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸುತ್ತದೆ. ಈ ಹಿಂದಿನ ಸಮೀಕ್ಷೆಗಳಲ್ಲಿ ವೀರಶೈವ ಮತ್ತು ಲಿಂಗಾಯತರನ್ನು ಒಂದು ಜಾತಿ ಎಂದು ಪರಿಗಣಿಸಲಾಗಿದೆ. ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ಅಧಿಕೃತವಾಗಿ ನೀಡಿಲ್ಲ. ಅದನ್ನು ಪರಿಗಣಿಸುವ ಅಗತ್ಯವಿದೆ. ನಮ್ಮ ಸಮಾಜದಲ್ಲಿ ಹಿಂದುಳಿದವರು, ಅತಿ ಹಿಂದುಳಿದವರು ಮತ್ತು ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಪಾರದರ್ಶಕವಾಗಿ ವಿವಿಧ ವೃತ್ತಿಯನ್ನು ಮಾಡುವ ಬಡವ ಮತ್ತು ಕಡು ಬಡವರಿಗೆ ಪ್ರಾಮಾಣಿಕವಾಗಿ ಅಂಕ ನೀಡಿ, ಸೂಕ್ತ ಪ್ರವರ್ಗಕ್ಕೆ ಸೇರಿಸುವಂತೆ ಹೇಳಿದ್ದಾರೆ.ಮಹಾಸಭಾದ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಶ್ರೀ ಹೆಚ್.ಎಂ.ರೇಣುಕ ಪ್ರಸನ್ನ, ಉಪಾಧ್ಯಕ್ಷರಾದ ಶ್ರೀ ಬಿ.ಎಸ್. ಸಚ್ಚಿದಾನಂದ ಮೂರ್ತಿ, ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ವೀಣಾ ಕಾಶಪ್ಪನವರ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ನಟರಾಜ ಸಾಗರನಹಳ್ಳಿ ಸೇರಿದಂತೆ ಮಹಾಸಭೆ ಮತ್ತು ಮಹಾಸಭೆಯ ಎಲ್ಲ ಹಂತದ ಘಟಕಗಳ/ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







