ಮಡಿಕೇರಿ ಮೂಲದ ನಟಿ ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರಕೊಂಡ ಡೇಟ್ ಮಾಡುತ್ತಿರುವ ಬಗ್ಗೆ ಸಾಕಷ್ಟು ರೂಮರ್ ಗಳಿದ್ದವು. ಇದೀಗ ಈ ಜೋಡಿ ಅದಕ್ಕೆ ಫುಲ್ ಸ್ಟಾಪ್ ಹಾಕಿದ್ದು, ಎಂಗೇಜ್ಡ್ ಆಗಿದ್ದಾರೆ.
ಕನ್ನಡದ ಕಿರಿಕ್ ಪಾರ್ಟಿ ಮೂಲಕ ಹೆಸರು ಮಾಡಿದ್ದ ರಶ್ಮಿಕಾ ಬಾಲಿವುಡ್ ನಲ್ಲೂ ಮಿಂಚಿ ನ್ಯಾಷನಲ್ ಕ್ರಶ್ ಎನಿಸಿದ್ದರು.
ಇನ್ನು ತೆಲುಗಿನ ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ಅಪಾರ ಅಭಿಮಾನಿ ಬಳಗ ಸಂಪಾದಿಸಿರುವ ದೇವರಕೊಂಡ ಸ್ಟಾರ್ ನಟರಲ್ಲೊಬ್ಬರು ಎನಿಸಿದ್ದಾರೆ.
ವಿಜಯ್ ಮನೆಯಲ್ಲಿ ನಿಶ್ಚಿತಾರ್ಥ ನಡೆದಿದ್ದು ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಟಾಲಿವುಡ್ನ ವಿಶ್ವಾಸಾರ್ಹ ಮೂಲಗಳಿಂದ ಬಂದಿರುವ ವರದಿಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ರಹಸ್ಯವಾಗಿ ಹೈದರಾಬಾದ್ನ ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ನಿಶ್ಚಿತಾರ್ಥವು ಇಬ್ಬರೂ ತಾರೆಯರ ಆಪ್ತ ಸ್ನೇಹಿತರು ಮತ್ತು ಎರಡು ಕುಟುಂಬಗಳ ಸಮ್ಮುಖದಲ್ಲಿ ಬಹಳ ಖಾಸಗಿಯಾಗಿ ನಡೆದಿದೆ. ವಿಜಯ್ ಮತ್ತು ರಶ್ಮಿಕಾ ಶೀಘ್ರವೇ ಈ ಸುದ್ದಿಯನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







